
ವಿಟ್ಲ : ಮನೆಯಲ್ಲಿ ಎಂಡಿಎಂಎ ದಾಸ್ತಾನು ಮಾಡಿದ್ದ ನಾಲ್ವರು ಆರೋಪಿಗಳ ಸಹಿತ ಲಕ್ಷಾಂತರ ರೂ ಮೌಲ್ಯದ ಮಾದಕ ವಸ್ತುಗಳನ್ನು ವಿಟ್ಲ ಪೊಲೀಸರ ತಂಡ ವಶಕ್ಕೆ ಪಡೆದುಕೊಂಡ ಘಟನೆ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಬಂಧಿತರಿಂದ ರೂ 1,79,700/- ಅಂದಾಜು ಮೌಲ್ಯದ 17.97 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ.
ಬಂಟ್ವಾಳ, ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ನಿವಾಸಿ ಅಶ್ರಫ್ ಜಿ (38), ಹಫೀಝ್ ಯಾನೆ ಅಪ್ಪಿ, ಅಫ್ವಾನ್ ಮತ್ತು ಅಶ್ರಫ್ ಎನ್ ಎ ಎಂಬವರನ್ನು ಬಂಧಿಸಲಾಗಿದೆ. ವಿಟ್ಲ ಠಾಣಾ ವ್ಯಾಪ್ತಿಯ ಬಂಟ್ವಾಳ ನೇರಳಕಟ್ಟೆ ಇಂದಿರಾ ನಗರ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿರುವ ಅಶ್ರಪ್ ಜಿ ಎಂಬಾತನು ತನ್ನ ಮನೆಯಲ್ಲಿ ಮಾದಕ ವಸ್ತುವಾದ ಎಂಡಿಎಂಎ ಸಂಗ್ರಹಿಸಿ ಗಿರಾಕಿಗಳಿಗೆ ಮಾರಾಟ ಮಾಡುತ್ತಿರುವುದಾಗಿ ಮಾಹಿತಿಯ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ ರ ತಂಡ ದಾಳಿ ನಡೆಸಿದೆ.
ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಎಂಬಲ್ಲಿ, ಬಂಟ್ವಾಳ ನಿವಾಸಿ ಅಶ್ರಫ್ ಜಿ (38), ಎಂಬಾತನು ವಾಸವಿದ್ದ ಮನೆಯಲ್ಲಿ ಹಫೀಝ್ ಯಾನೆ ಅಪ್ಪಿ, ಅಫ್ವಾನ್ ಮತ್ತು ಅಶ್ರಫ್ ಎನ್ ಎ ರವರೊಂದಿಗೆ ಸೇರಿಕೊಂಡು ಮನೆಯಿಂದ ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ. ದಾಳಿಯ ವೇಳೆನೆಯೊಳಗೆ ದಾಸ್ತಾನು ಇರಿಸಲಾಗಿದ್ದ ಮಾದಕ ವಸ್ತುಗಳ ಸಹಿತ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.














