Friday, March 13, 2026
ಸುದ್ದಿ

ಕನ್ಯಾಡಿ ಸೇವಾಭಾರತಿಯಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ರಾಣೆಬೆನ್ನೂರಿನ ಕು. ಚೈತ್ರಾ ರವರಿಗೆ ಗಾಲಿಕುರ್ಚಿ ವಿತರಣೆ – ಕಹಳೆ ನ್ಯೂಸ್

ಸೌತಡ್ಕ (ಮಾ.12): ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು.

ಈ ತಿಂಗಳಲ್ಲಿ 32 ಗಾಲಿಕುರ್ಚಿಗಳನ್ನು ವಿತರಿಸುವುದಾಗಿ ನಿರ್ಧರಿಸಿದ್ದು ಅರ್ಹ ಫಲಾನುಭವಿ ರಾಣೆಬೆನ್ನೂರಿನ ಕು. ಚೈತ್ರಾ ರವರಿಗೆ ಸೌತಡ್ಕ ಸೇವಾಧಾಮ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರದಲ್ಲಿ ಸಂಸ್ಥೆಯ ಹಿತೈಷಿ ಮತ್ತು ದಾನಿಗಳಾದ ಕೊಕ್ಕಡದ ಶ್ರೀ ಗಣೇಶ್ ಪಿ. ಐತಾಳ್ ರವರು ಗಾಲಿಕುರ್ಚಿಯನ್ನು ಹಸ್ತಾಂತರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಶ್ರೀಯುತರು ಸೇವಾಧಾಮ ಪುನಶ್ಚೇತನ ಕೇಂದ್ರಕ್ಕೆ ಒಂದು ಹೊತ್ತಿನ ಊಟದ ದೇಣಿಗೆಯನ್ನು ನೀಡಿ ಸಹಕರಿಸಿದರು. ಸೇವಾಭಾರತಿಯ ಉಪಾಧ್ಯಕ್ಷರಾದ ಶ್ರೀ ಬಾಲಕೃಷ್ಣ ಹಾಗೂ ಸಿಬ್ಬಂದಿ ವರ್ಗದವರು ಸಂಸ್ಥೆಯ ಪರವಾಗಿ ದೇಣಿಗೆಯನ್ನು ಸ್ವೀಕರಿಸಿ ಧನ್ಯವಾದವಿತ್ತರು.

ಜಾಹೀರಾತು
ಜಾಹೀರಾತು