Sunday, March 15, 2026
ಜಿಲ್ಲೆಶಿವಮೊಗ್ಗಸುದ್ದಿ

ಮೇ 1ರಿಂದ ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸೇವೆ ಸ್ಥಗಿತ – ಕಹಳೆ ನ್ಯೂಸ್

ಶಿವಮೊಗ್ಗ: ನಗರದ ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ದೇಶದ 131 ನಗರಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಪ್ರಮುಖ ವಿಮಾನಯಾನ ಸಂಸ್ಥೆ ಇಂಡಿಗೋ ಏಪ್ರಿಲ್ ಅಂತ್ಯಕ್ಕೆ ತನ್ನ ಸೇವೆಯನ್ನು ಸ್ಥಗಿತಗೊಳಿಸುವ ಮುನ್ಸೂಚನೆ ನೀಡಿದೆ.

ಮಾಹಿತಿಯ ಪ್ರಕಾರ, ಇಂಡಿಗೋ ಸಂಸ್ಥೆಯು ಏಪ್ರಿಲ್ 30ರ ವರೆಗಷ್ಟೇ ಟಿಕೆಟ್ ಕಾಯ್ದಿರಿಸಲು ಅವಕಾಶ ನೀಡಿದ್ದು, ಮೇ 1ರಿಂದ ಯಾವುದೇ ಬುಕ್ಕಿಂಗ್ ಲಭ್ಯವಿಲ್ಲ. ಇದು ಅಚ್ಚರಿಗೆ ಕಾರಣವಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಾರಣವೇನು?
ಇತ್ತೀಚೆಗೆ ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತದ ಹಿನ್ನೆಲೆ ಡಿಜಿಸಿಎ (DGCA) ವಿಮಾನಯಾನ ನಿಯಮಗಳನ್ನು ಅತ್ಯಂತ ಕಠಿಣಗೊಳಿಸಿದೆ. ಪೈಲಟ್‌ಗಳ ಕೆಲಸದ ಅವಧಿ ಮತ್ತು ವಿಮಾನಗಳ ನಿರ್ವಹಣೆಗೆ ಸಂಬಂಧಿಸಿದ ಹೊಸ ನಿಯಮಗಳಿಂದಾಗಿ ಇಂಡಿಗೋ ಸಂಸ್ಥೆಗೆ ಪೈಲಟ್‌ಗಳು ಕೊರತೆ ಎದುರಾಗಿದೆ. ಈ ತಾಂತ್ರಿಕ ಕಾರಣದಿಂದಾಗಿ ಸಂಸ್ಥೆಯು ಸಣ್ಣ ನಗರಗಳಿಗೆ ನೀಡುತ್ತಿದ್ದ ಎಟಿಆರ್ ವಿಮಾನ ಸೇವೆಗಳನ್ನು ಕಡಿತಗೊಳಿಸಲು ಮುಂದಾಗಿದೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು