Saturday, June 13, 2026
ಜಿಲ್ಲೆಸುದ್ದಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಮೂವರು RSIಗಳು ಸ್ಥಳದಲ್ಲೇ ದುರ್ಮರಣ – ಕಹಳೆ ನ್ಯೂಸ್

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಮೂವರು ಆರ್‌ಎಸ್‌ಐಗಳು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ.

ಜಾಹೀರಾತು

ರಾಷ್ಟ್ರೀಯ ಹೆದ್ದಾರಿ 150ಎ ಹೆಗ್ಗೆರೆ ಬಳಿ ಅಪಘಾತ ಸಂಭವಿಸಿದ್ದು, ರಿಸರ್ವ್ ಸಬ್‌ಇನ್‌ಸ್ಪೆಕ್ಟರ್‌ಗಳಾದ ಮಂಜುನಾಥ್, ಅಂಬರೀಶ್, ಸಚಿನ್ ಮೃತ ದುರ್ದೈವಿಗಳು. ಗಾಯಗೊಂಡಿರುವ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರು ಕಡೆಯಿಂದ ಬಳ್ಳಾರಿಗೆ ತೆರಳುವಾಗ ಘಟನೆಯಾಗಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

PSI ಈಶ್ವರ್, RSI ಮಹಾಂತೇಶ್‌ಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.