Wednesday, March 18, 2026
ದೆಹಲಿರಾಜ್ಯಸುದ್ದಿ

ದೆಹಲಿಯ ಪಾಲಂನ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ : 8 ಮಂದಿ ಸಾವು-ಸ್ಥಳದಲ್ಲಿ 30 ಅಗ್ನಿಶಾಮಕದಿಂದ ರಕ್ಷಣಾ ಕಾರ್ಯಾಚರಣೆ – ಕಹಳೆ ನ್ಯೂಸ್

ನವದೆಹಲಿ: ವಸತಿ ಕಟ್ಟಡವೊಂದರಲ್ಲಿ ಬುಧವಾರ ಬೆಳಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, 8 ಮಂದಿ ಸಾವನ್ನಪ್ಪಿರುವ ಘಟನೆ ನೈಋತ್ಯ ದೆಹಲಿಯ ಪಾಲಂ ಪ್ರದೇಶದಲ್ಲಿ ನಡೆದಿದೆ.

ಬುಧವಾರ ಮುಂಜಾನೆ 7 ಗಂಟೆಯ ಸುಮಾರಿಗೆ ಅಗ್ನಿ ಅವಘಡದ ಬಗ್ಗೆ ಕರೆ ಬಂದಿದೆ. ಘಟನಾ ಸ್ಥಳಕ್ಕೆ 30 ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಕಟ್ಟಡದ ಒಳಗೆ ಇನ್ನೂ ಹಲವರು ಸಿಲುಕಿರುವ ಶಂಕೆಯಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ರಕ್ಷಣಾ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಸಿಬ್ಬಂದಿಗೆ ಸಹಾಯ ಮಾಡಲು ಪೊಲೀಸರು ಕೂಡ ಕೈಜೋಡಿಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

ಜಾಹೀರಾತು
ಜಾಹೀರಾತು