Thursday, March 19, 2026
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಮಾ. 20 ರಂದು ರಾಷ್ಟ್ರೀಯ ವಿಚಾರ ಸಂಕಿರಣ : ಡಾ| ಪ್ರಭಾಕರ್ ಭಟ್ ಕಲ್ಲಡ್ಕ -ಕಹಳೆ ನ್ಯೂಸ್

ಬಂಟ್ವಾಳ: ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ, ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯ ದ ವತಿಯಿಂದ ” ವಸಾಹತು ಮನೋಭಾವದಿಂದ ಭಾರತೀಯತೆಯೆಡೆಗೆ – ಒಂದು ಚಿಂತನೆ ” ಎಂಬ ವಿಷಯದ ಮೇಲೆ ರಾಷ್ಟ್ರೀಯ ವಿಚಾರಸಂಕಿರಣ ಮಾ.20 ರಂದು ಶುಕ್ರವಾರ ಶ್ರೀರಾಮ ವಿದ್ಯಾಕೇಂದ್ರದ ಆಜಾದ್ ಭವನದಲ್ಲಿ ನಡೆಯಲಿದೆ ಎಂದು ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ್ ಭಟ್ ಹೇಳಿದರು.

ಬಿ.ಸಿ.ರೋಡಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪ್ರಾಧ್ಯಾಪಕಿ ಆರತಿ ವಿ.ಬಿ., ಮಾಜಿ ಶಾಸಕ ರಾಜೀವ ಕುಡಚಿ, ಚಿಂತಕ ರೋಹಿತ್ ಚಕ್ರತೀರ್ಥ,
ಭಾಗವಹಿಸುವರು ಅಖಿಲ ಭಾರತೀಯ ಟೋಳಿ ಸದಸ್ಯ ರಘುನಂದನ್ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

12 ವರ್ಷಗಳಿಂದ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಸಂಪನ್ಮೂಲ ವ್ಯಕ್ತಿಗಳನ್ನೊಳಗೊಂಡ 11 ವಿಚಾರ ಸಂಕಿರಣ ನಡೆದಿದ್ದು, ಈ ಬಾರಿ 60ಕ್ಕೂ ಮಿಕ್ಕಿ ವಿಶ್ವ ವಿದ್ಯಾನಿಲಯ-ಗಳಿಂದ ಸುಮಾರು 750ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ. ಯುವ ಜನರಲ್ಲಿ ರಾಷ್ಟ್ರೀಯತೆ ಜೊತೆಗೆ ನೈಜ ಇತಿಹಾಸ ತಿಳಿಸುವ ಪ್ರಾಮಾಣಿಕ ಪ್ರಯತ್ನವನ್ನು ಶ್ರೀರಾಮ ವಿದ್ಯಾ ಸಂಸ್ಥೆ ನಡೆಸುತ್ತಿದೆ ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು

ಸುದ್ದಿಗೋಷ್ಠಿಯಲ್ಲಿ ಸಂಸ್ಥೆ ಅಧ್ಯಕ್ಷ ಬಿ.ನಾರಾಯಣ ಸೋಮಯಾಜಿ, ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರಡ್ಕ, ಸಂಚಾಲಕಿ ಲಕ್ಷ್ಮೀ ರಘುರಾಜ್ ಭಾಗವಹಿಸಿದ್ದರು.