Thursday, April 23, 2026
ಜಿಲ್ಲೆಸುದ್ದಿಹಾಸನ

ಜೂಜಾಡುವ ವೇಳೆ ಪೊಲೀಸರ ದಾಳಿ : ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವು -ಕಹಳೆ ನ್ಯೂಸ್

ಹಾಸನ: ಜೂಜಾಡುವ ವೇಳೆ ಪೊಲೀಸರು ದಾಳಿ ನಡೆಸಿದ್ದು, ಪೊಲೀಸರಿಂದ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಅರೆಕೆರೆ ಗ್ರಾಮದಲ್ಲಿ ನಡೆದಿದೆ.

ಪ್ರವೀಣ್ (34) ಮೃತಪಟ್ಟ ವ್ಯಕ್ತಿ. ಯುಗಾದಿ ಹಬ್ಬ ಹಿನ್ನೆಲೆಯಲ್ಲಿ ಪಕ್ಕದ ತಾವರೆಹಳ್ಳಿ ನಿರ್ಜನ ಪ್ರದೇಶದಲ್ಲಿ ಯುವಕರ ಗುಂಪು ಜೂಜಾಡುತ್ತಿದ್ದರು. ಜೂಜಾಟದ ವಿಷಯ ತಿಳಿದು ಜಾವಗಲ್ ಪೊಲೀಸರು ದಾಳಿ‌ ಮಾಡಿದ್ದಾರೆ. ಈ ವೇಳೆ ಸ್ಥಳದಿಂದ‌ ತಪ್ಪಿಸಿಕೊಳ್ಳಲು‌ ಜೂಜಾಡುತ್ತಿದ್ದ ಯುವಕರು ಓಡಿದ್ದಾರೆ. ಮೂರ್ಛೆ ರೋಗದಿಂದ ಬಳಲುತ್ತಿದ್ದ ಪ್ರವೀಣ್ ಓಡುವ ವೇಳೆ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಶಂಕಿಸಿಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆ ಸಂಬಂಧ ಜಾವಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಹಾಸನದ ಹಿಮ್ಸ್‌ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದ್ದು, ಶವದ ಮೇಲೆ ರಕ್ತದ ಕಲೆಗಳಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.