ನ್ಯೂಯಾರ್ಕ್‌ನಲ್ಲಿ ಲ್ಯಾಂಡಿಂಗ್ ವೇಳೆ ಟ್ರಕ್‌ಗೆ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಡಿಕ್ಕಿ : ಇಬ್ಬರು ಸಾವು- ಕಹಳೆ ನ್ಯೂಸ್

ನ್ಯೂಯಾರ್ಕ್: ಇಲ್ಲಿನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಫೈರ್ ಟ್ರಕ್‌ಗೆ ಡಿಕ್ಕಿಯಾಗಿದೆ. ಈ ಅವಘಡದಲ್ಲಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಕೆನಡಾದ ಮಾಂಟ್ರಿಯಲ್‌ನಿಂದ ಬರುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ಸಿಆರ್‌ಜೆ -900 ವಿಮಾನವು ರನ್‌ವೇ 4 ರಲ್ಲಿ ಲ್ಯಾಂಡ್ ಆಗಿತ್ತು. ಈ ವೇಳೆ ರನ್ ವೇ ನಲ್ಲೇ ಫೈರ್ ಟ್ರಕ್‌ಗೆ ವಿಮಾನ ಡಿಕ್ಕಿಯಾಗಿದೆ. ಈ ಅವಘಡದ ಬಳಿಕ ಒಳ ಬರುವ ವಿಮಾನಗಳಿಗೆ ಏರ್‌ಪೋರ್ಟ್ ಮುಚ್ಚಲಾಗಿದೆ.
ವಿಮಾನ ಅಪಘಾತದ ಬಳಿಕ ರಕ್ಷಣಾ ಕಾರ್ಯಾಚರಣೆಯ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿವೆ. ವೀಡಿಯೋದಲ್ಲಿ ವಿಮಾನದ ಮುಂಭಾಗಕ್ಕೆ ಹಾನಿಯಾಗಿರುವುದು ಕಾಣಿಸುತ್ತದೆ.ವಿಮಾನ ಅಪಘಾತದಲ್ಲಿ ಗಾಯಗೊಂಡವರು ಹಾಗೂ ಹಾನಿಯ ಬಗ್ಗೆ ಅಧಿಕಾರಿಗಳು ಇನ್ನೂ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.









