Friday, April 24, 2026
ಸುದ್ದಿ

ಪದ್ಯಾಣಕ್ಕೆ ಭೇಟಿ ನೀಡಿದ ಡಾ. ಭರತ್ ಶೆಟ್ಟಿ, ನಳಿನ್, ಮಠಂದೂರು – ಕಹಳೆ ನ್ಯೂಸ್ 

ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಪದ್ಯಾಣ ಶ್ರೀ ಮಹಾಲಿಂಗೇಶ್ವರ ಕ್ಷೇತ್ರಕ್ಕೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಭೇಟಿ ನೀಡಿದರು.

ಇದೇ ಸಂದರ್ಭ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ ಸಂಜೀವ ಮಠಂದೂರು ಪದ್ಯಾಣ ಶ್ರಿ ಮಹಾಲಿಂಗೇಶ್ವರ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು. ಉಪ್ಪಿನಂಗಡಿಯಿAದ ಕ್ಷೇತ್ರದವರೆಗಿನ ಹೊರೆಕಾಣಿಕೆ ಮೆರವಣಿಗೆಯಲ್ಲಿ ಭಾಗವಹಿಸಿದ ಅವರು, ಕ್ಷೇತ್ರದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ಅರುಣಶ್ಯಾಮ್, ಆಡಳಿತ ಮೊಕ್ತೇಸರ ಸೇರಾಜೆ ಸತ್ಯನಾರಾಯಣ ಭಟ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅರವಿಂದ ಪದ್ಯಾಣ ಸಹಿತ ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು