Thursday, April 23, 2026
ಜಿಲ್ಲೆಸುದ್ದಿ

ದಾವಣಗೆರೆಯಲ್ಲಿ ಪ್ರಚಾರದ ವೇಳೆ ಮುಸ್ಲಿಮರಿಂದ ‘ಗೋ ಬ್ಯಾಕ್ ಕಾಂಗ್ರೆಸ್’ ಪ್ರತಿಭಟನೆ-ಕಹಳೆ ನ್ಯೂಸ್

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಪ್ರಚಾರದ ವೇಳೆ ಮುಸ್ಲಿಮರು  ‘ಗೋ ಬ್ಯಾಕ್ ಕಾಂಗ್ರೆಸ್’ ಪ್ರತಿಭಟನೆ ನಡೆಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪ್ರಚಾರದ ವೇಳೆ ಮುಸ್ಲಿಮರು ‘ಗೋ ಬ್ಯಾಕ್’ ಎಂದು ಘೋಷಣೆ ಕೂಗಿದ್ದಾರೆ. ದಾವಣಗೆರೆಯ ಬಾಷಾ ನಗರ ಮುಸ್ಲಿಂ ರಸ್ತೆಯಲ್ಲಿ ಪ್ರಚಾರದ ಸಂದರ್ಭದಲ್ಲಿ ಘಟನೆ ನಡೆದಿದ್ದು, ಸಾವಿರಾರು ಮುಸ್ಲಿಮರು ‘ಗೋ ಬ್ಯಾಕ್, ಗೋ ಬ್ಯಾಕ್ ಕಾಂಗ್ರೆಸ್’  ಎಂದು ಘೋಷಣೆ ಕೂಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಾರಿ ಕಾಂಗ್ರೆಸ್‌ನಿಂದ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡುವಂತೆ ಪ್ರಬಲ ಒತ್ತಾಯ ಕೇಳಿ ಬಂದಿತ್ತು. ಆದರೆ ಕಾಂಗ್ರೆಸ್ ಹೈಕಮಾಂಡ್ ಶಾಮನೂರು ಕುಟುಂಬಕ್ಕೆ ಟಿಕೆಟ್ ನೀಡಿದೆ. ಇದರಿಂದ ಮುಸ್ಲಿಂ ಸಮುದಾಯ ಕಾಂಗ್ರೆಸ್ ವಿರುದ್ಧ ಅಸಮಧಾನಗೊಂಡಿದ್ದು, ಕಾಂಗ್ರೆಸ್ ಪ್ರಚಾರದ ವೇಳೆ ‘ಗೋ ಬ್ಯಾಕ್ ಕಾಂಗ್ರೆಸ್’ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಹಾಗೇ ಪ್ರಚಾರ ನಡೆಸುತ್ತಾ ಕಾರಿನಲ್ಲಿ ತೆರಳಿದ್ದಾರೆ.