Thursday, April 23, 2026
ಬೆಂಗಳೂರುರಾಜ್ಯಸುದ್ದಿ

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಮಧ್ಯಾಹ್ನ 3ಕ್ಕೆ ವೆಬ್‌ಸೈಟ್‌ನಲ್ಲಿ ರಿಸಲ್ಟ್ ಲಭ್ಯ -ಕಹಳೆ ನ್ಯೂಸ್

ಬೆಂಗಳೂರು: ನಾಳೆ ಏ.9 ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶ ಪ್ರಕಟವಾಗಲಿದ್ದು, ಮಧ್ಯಾಹ್ನ 3ಕ್ಕೆ ವೆಬ್‌ಸೈಟ್‌ನಲ್ಲಿ ರಿಸಲ್ಟ್ ಲಭ್ಯವಾಗಲಿದೆ.


ಈ ಮೊದಲು ಸುದ್ದಿಗೋಷ್ಠಿ ನಡೆಸಿ ಬಳಿಕ ಫಲಿತಾಂಶ ಪ್ರಕಟವಾಗುತ್ತಿತ್ತು. ಆದರೆ ಈ ಬಾರಿ ಮೊದಲು ವೈಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಬಳಿಕ ಸುದ್ದಿಗೋಷ್ಠಿ ನಡೆಯಲಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಸಚಿವ ಮಧು ಬಂಗಾರಪ್ಪ ಅವರು ಸಂಜೆ 6:15ಕ್ಕೆ ಫಲಿತಾಂಶದ ಬಗ್ಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಇಲಾಖೆ ವೆಬ್‌ಸೈಟ್  ಫಲಿತಾಂಶ ಲಭ್ಯವಾಗಲಿದೆ ಜೊತೆಗೆ  ಮೊಬೈಲ್ ಆಪ್ ಮೂಲಕ ಫಲಿತಾಂಶ ಪಡೆಯಬಹುದು ಹಾಗೂ ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ, ವಾಟ್ಸಪ್‌ , SMSಮೂಲಕವೂ ಫಲಿತಾಂಶ ರವಾನೆ ಆಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು