Friday, April 24, 2026
ಸುದ್ದಿ

ಕದನ ವಿರಾಮ ಘೋಷಣೆ ಬೆನ್ನಲ್ಲೇ 10 ನಿಮಿಷದಲ್ಲಿ ಲೆಬನಾನ್‌ ಮೇಲೆ ಇಸ್ರೇಲ್‌ನಿಂದ 100 ಕ್ಷಿಪಣಿ ದಾಳಿ -ಕಹಳೆ ನ್ಯೂಸ್

ಟೆಲ್‌ ಅವಿವ್‌: ಲೆಬನಾನ್‌  ಮೇಲೆ ಕೇವಲ 10 ನಿಮಿಷಗಳಲ್ಲಿ ಇಸ್ರೇಲ್‌ ವಾಯುಪಡೆ 100 ಕ್ಷಿಪಣಿ ದಾಳಿ ನಡೆಸಿದೆ. ಇದನ್ನು ಈ ಯುದ್ಧದ ಅತ್ಯಂತ ದೊಡ್ಡ ಸಂಘಟಿತ ದಾಳಿ ಎಂದು ಇಸ್ರೇಲ್ ಬಣ್ಣಿಸಿದೆ.

ರಾಜಧಾನಿ ಬೈರೂತ್  ಮಧ್ಯಭಾಗ, ಬೆಕಾ ವ್ಯಾಲಿ  ಮತ್ತು ದಕ್ಷಿಣ ಲೆಬನಾನ್‌ನ ಹಿಜ್ಬುಲ್ಲಾ ಕಮಾಂಡ್ ಕೇಂದ್ರಗಳು ಹಾಗೂ ಶಸ್ತ್ರಾಸ್ತ್ರ ನೆಲೆಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ.
ಲೆಬನಾನ್ ಆರೋಗ್ಯ ಸಚಿವಾಲಯದ ವರದಿ ಪ್ರಕಾರ ಈ ಭೀಕರ ದಾಳಿಯಲ್ಲಿ ಕನಿಷ್ಠ 254 ಜನರು ಸಾವನ್ನಪ್ಪಿದ್ದಾರೆ ಮತ್ತು 800ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇಸ್ರೇಲ್‌ನ ದಾಳಿಗಳಿಗೆ ಪ್ರತಿಯಾಗಿ ಹಿಜ್ಬುಲ್ಲಾ ಉಗ್ರ ಸಂಘಟನೆ ಕೂಡ ಉತ್ತರ ಇಸ್ರೇಲ್‌ನ ಸೇನಾ ನೆಲೆಗಳು ಮತ್ತು ಹೈಫಾ  ತೈಲ ಸಂಸ್ಕರಣಾಗಾರದ ಮೇಲೆ ಕ್ಷಿಪಣಿ ದಾಳಿಗಳನ್ನು ನಡೆಸಿದೆ. ಈ ಸಂಘರ್ಷದಿಂದಾಗಿ ಲೆಬನಾನ್‌ನಲ್ಲಿ ಈವರೆಗೆ 1,500ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ.