Tuesday, June 9, 2026
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಐವರು ವಿದ್ಯಾರ್ಥಿಗಳು ಅರೆಸ್ಟ್! -ಕಹಳೆ ನ್ಯೂಸ್

ಮಂಗಳೂರು : ಮಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ವಿದ್ಯಾರ್ಥಿಗಳೇ ಡ್ರಗ್ಸ್ ಮಾರಾಟ ಜಾಲದಲ್ಲಿ ಭಾಗಿಯಾಗಿರೋದು ಪತ್ತೆಯಾಗಿದ್ದು, ಸದ್ಯ ಪೊಲೀಸರು ಐವರು ವಿದ್ಯಾರ್ಥಿಗಳನ್ನು ಅರೆಸ್ಟ್ ಮಾಡಿದ್ದಾರೆ.

ಜಾಹೀರಾತು

ಈ ಕುರಿತು ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಮಾತನಾಡಿ, ವಿದ್ಯಾರ್ಥಿಯೊಬ್ಬನ ಪೋಷಕರು ತಮ್ಮ ಪುತ್ರನ ಬಳಿ ಸಣ್ಣ ಪ್ಯಾಕೆಟ್ ಗಾಂಜಾ ದೊರಕಿದೆ ಎಂದು ಪೊಲೀಸರಿಗೆ ಮಂಗಳವಾರ ಮಾಹಿತಿ ನೀಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ತಕ್ಷಣ ಕಾರ್ಯಪ್ರವೃತ್ತರಾಗಿ ವಿದ್ಯಾರ್ಥಿಯ ಬೆನ್ನು ಬಿದ್ದ ಪೊಲೀಸರಿಗೆ ಐವರು ಡ್ರಗ್ ಪೆಡ್ಲರ್ ವಿದ್ಯಾರ್ಥಿಗಳು ಇದರಲ್ಲಿ ಇರುವುದು ತಿಳಿದು ಬಂದಿದೆ.

ಮಂಗಳೂರು ನಗರದ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಇವರು ಹಾಸ್ಟೆಲ್‌ನಲ್ಲಿ ಇರದೇ ಬಾಡಿಗೆ ಕೊಠಡಿಯಲ್ಲಿ ವಾಸ್ತವ್ಯವಿದ್ದರು‌. ಈ ಐವರೂ ಗಾಂಜಾವನ್ನು ಬಾಡಿಗೆ ಕೊಠಡಿಯಲ್ಲೇ ಸಣ್ಣ ಪೊಟ್ಟಣವನ್ನಾಗಿ ಮಾಡಿ ಅಲ್ಲಿಂದಲೇ ಮಾರಾಟ ಮಾಡುತ್ತಿದ್ದರು. ಆರು ವಿವಿಧ ಕಾಲೇಜುಗಳ 40 ಮಂದಿ ವಿದ್ಯಾರ್ಥಿಗಳು ಹಾಗೂ ಬೇರೆ 10 ಮಂದಿ ಇವರ ಗಾಂಜಾ ಖರೀದಿದಾರರ ಪಟ್ಟಿಯಲ್ಲಿದ್ದರು.

ಗಾಂಜಾ ಖರೀದಿ ಮಾಡುವ ಎಲ್ಲರನ್ನೂ, ಅವರ ಪೋಷಕರನ್ನು ಕರೆಸಿ ಕೌನ್ಸೆಲಿಂಗ್ ಮಾಡಲಾಗುತ್ತದೆ. ಪೋಷಕರು ತಮ್ಮ ಮಕ್ಕಳ ವರ್ತನೆಯಲ್ಲಿ ಬದಲಾವಣೆ ಕಂಡು ಬಂದಲ್ಲಿ ಪೊಲೀಸರಿಗೆ ತಿಳಿಸಬೇಕು. ಜೊತೆಗೆ ಹಾಸ್ಟೆಲ್‌ನಲ್ಲಿರದೆ, ಬಾಡಿಗೆ ಕೊಠಡಿಯಲ್ಲಿ ವಾಸ್ತವ್ಯವಿದ್ದರೆ ಈ ಬಗ್ಗೆಯೂ ಪೋಷಕರು ಹಾಗೂ ಕಾಲೇಜು ಆಡಳಿತ ಮಂಡಳಿ ಗಮನಹರಿಸಬೇಕು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

Dailyhunt