Recent Posts

Monday, June 8, 2026
ಸುದ್ದಿ

ಬಿಹಾರದ ಮೊದಲ ಬಿಜೆಪಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಸಾಮ್ರಾಟ್ ಚೌಧರಿ – ಕಹಳೆ ನ್ಯೂಸ್

ಪಾಟ್ನಾ: ಬಿಹಾರದ  ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ  ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ಬಿಹಾರದ ಬಿಜೆಪಿಯ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
ಪಾಟ್ನಾದ ಲೋಕ ಭವನದಲ್ಲಿ ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಅವರು ಸಾಮ್ರಾಟ್ ಚೌಧರಿಯವರಿಗೆ ಪ್ರಮಾಣವಚನ ಬೋಧಿಸಿದರು. ಇದೇ ವೇಳೆ, ಉಪ ಮುಖ್ಯಮಂತ್ರಿಗಳಾಗಿ ಜೆಡಿಯು ನಾಯಕರಾದ ವಿಜಯ್ ಚೌಧರಿ ಮತ್ತು ಬಿಜೇಂದ್ರ ಯಾದವ್ ಪ್ರಮಾಣ ವಚನ ಸ್ವೀಕರಿಸಿದರು.

ಜಾಹೀರಾತು

ಉಪಮುಖ್ಯಮಂತ್ರಿ ಬಿಜೇಂದ್ರ ಯಾದವ್ ಮಾತನಾಡಿ, ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಕೂಡ ನಿತೀಶ್ ಕುಮಾರ್ ಅವರ ಪರಂಪರೆಯನ್ನು ಮುಂದುವರಿಸಲಿದ್ದಾರೆ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ಸುಧಾರಣೆಗೆ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ಅವರು ರಾಜೀನಾಮೆ ನೀಡಿದ್ದರು. ತಮ್ಮ ಸಚಿವ ಸಂಪುಟವನ್ನು ವಿಸರ್ಜಿಸಿದ ನಂತರ ಅವರು ಏ.14ರ ಮಧ್ಯಾಹ್ನ ಲೋಕ ಭವನದಲ್ಲಿ ರಾಜ್ಯಪಾಲರಾದ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸೈಯದ್ ಅತಾ ಹಸ್ನೈನ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದರು.