
ತುಮಕೂರು: ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ 6 ಮಂದಿ ಆರೋಪಿಗಳನ್ನು ತುಮಕೂರಿನ ತಿಲಕ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ತಿಲಕ್ ಪಾರ್ಕ್ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೇ ಆರೋಪಿಗಳ ಬಳಿಯಿದ್ದ 100 ಮಾದಕ ಮಾತ್ರೆಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ವಿರುದ್ಧ ಎಂಡಿಎಂಎ ಆಕ್ಟ್ ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.









