Recent Posts

Monday, June 8, 2026
ಬೆಂಗಳೂರುರಾಜ್ಯಸುದ್ದಿ

ಲಾರಿ ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ : ನಾಲ್ವರು ದುರ್ಮರಣ -ಕಹಳೆ ನ್ಯೂಸ್

ಬಳ್ಳಾರಿ: ಲಾರಿ (Lorry) ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ (Serial Accident) ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಐದಾರು ಮಂದಿ ಗಾಯಗೊಂಡಿರುವ ಘಟನೆ ವಿಜಯನಗರ (Vijayanagar) ಜಿಲ್ಲೆಯ ಹೊಸಪೇಟೆ (Hospete) ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ಬೆಳ್ಳುಳ್ಳಿ ಸಾಗಾಟ ಮಾಡುತ್ತಿದ್ದ ಲಾರಿ ಹೊಸಪೇಟೆ ಹೊರವಲಯದ ಟನಲ್‌ನಿಂದ ಡಣಾಪುರದವರೆಗೆ ಬೈಕ್, ಕಾರು ಹಾಗೂ ಬಸ್‌ಗೆ ಹೊಡೆದುಕೊಂಡು ಹೋಗಿದೆ. ಸದ್ಯಕ್ಕೆ ನಾಲ್ಕು ಜನರು ಸಾವನ್ನಪ್ಪಿರೋದರ ಕುರಿತು ಮಾಹಿತಿ ಲಭಿಸಿದೆ. ಅಪಘಾತದ ರಭಸಕ್ಕೆ ಒಂದು ಕಾರು ಅಪ್ಪಚ್ಚಿಯಾಗಿದೆ.

ಜಾಹೀರಾತು