Sunday, September 6, 2026
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಕಮಿಷನರ್ ವಿರುದ್ಧ ಡಿಜಿಪಿಗೆ ದೂರು ನೀಡಿದ ಎಸ್ಪಿ ಕಾಶಿ -ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಕಮಿಷನರ್ ವಿರುದ್ಧ ಡಿಜಿಪಿ ಸಲೀಂ ಅವರಿಗೆ ಎಸ್ಪಿ ಕಾಶಿ ಅವರು ದೂರು ನೀಡಿದ್ದಾರೆ.

ಜಾಹೀರಾತು

ಮಾನಸಿಕ ಕಿರುಕುಳ, ದರ್ಪ ಮತ್ತು ತಾರತಮ್ಯ ವಿರುದ್ಧ ನಿಂತ ಎಸ್ಪಿ ಕಾಶಿ ಅವರು ಡಿಜಿಪಿಗೆ ಪತ್ರ ಬರೆದಿದ್ದಾರೆ. 30 ನಿಮಿಷ ಟೈಮ್ ಕೊಡಿ, ಮಂಗಳೂರು ಕಮಿಷನರ್ ಕರ್ಮಕಾಂಡ ಬಯಲು ಮಾಡುತ್ತೇನೆ. ಅಧಿಕಾರಿಗೆ ಬ್ಯಾಕ್ ಟು ಬ್ಯಾಕ್ ಮೆಮೊ ಕೊಟ್ಟು, ನಾವು ಹೇಳಿದಂತೆ ಕೆಲಸ ಮಾಡಬೇಕು ಇಲ್ಲವಾದರೆ ಮಾನಸಿಕ ಹಿಂಸೆ ಕೊಡ್ತಾರೆ. ಕನ್ನಡಿಗ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿ, ಟಾರ್ಚರ್ ಕೊಡ್ತಿದ್ದಾರೆ. ಹಲವು ಬಾರಿ ಅನ್ಯಾಯದ ವಿರುದ್ಧ ಲಿಖಿತ ದೂರು ನೀಡಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್ – 15 ಮಂದಿ ದುರ್ಮರಣ, ಹಲವರಿಗೆ ಗಾಯ

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

 

ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲವು ಐಪಿಎಸ್ ಅಧಿಕಾರಿಗಳು ತಮ್ಮ ಅಧಿಕಾರ ಬಲದಿಂದ ಕೆಳಹಂತದ ಅಧಿಕಾರಿಗಳು/ಸಿಬ್ಬಂದಿ ಮೇಲೆ ದರ್ಪ, ತಾರತಮ್ಯ, ಸ್ವಜನ ಪಕ್ಷಪಾತದಂತಹ ಪ್ರವೃತ್ತಿಗಳನ್ನು ತೋರುತ್ತಿರುತ್ತಾರೆ. ಅದರಲ್ಲೂ ಬೇರೆ ರಾಜ್ಯಗಳಿಂದ ಬಂದು ಕರ್ನಾಟಕದಲ್ಲಿ ಕೆಲಸ ಮಾಡುತ್ತಿರುವ ಕೆಲವು ಐಪಿಎಸ್ ಅಧಿಕಾರಿಗಳು ಮೂಲತಃ ಕರ್ನಾಟಕದಲ್ಲಿಯೇ ಹುಟ್ಟಿ ಬೆಳೆದು ಇಲ್ಲಿಯೇ ತಾಯ್ನಾಡಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕನ್ನಡಿಗ ಅಧಿಕಾರಿಗಳನ್ನು ಹತ್ತಿಕ್ಕುವ ಉದ್ದೇಶದಿಂದ ವಿಪರೀತ ದರ್ಪ ತೋರಿಸಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುತ್ತಾರೆ.

ಹೊರರಾಜ್ಯದಿಂದ ಕನ್ನಡಿಗರ ಸೇವೆಗೆಂದು ಬಂದು ಕನ್ನಡಿಗರಿಂದ ಕೂಲಿ ಪಡೆಯುತ್ತಿರುವ ಮಂಗಳೂರು ಕಮಿಷನರ್‌ವರ ಕರ್ಮಕಾಂಡಗಳು, ಅಧೀನ ಅಧಿಕಾರಿ/ಸಿಬ್ಬಂದಿಗೆ ನೀಡಿರುವ ಕಿರುಕುಳಗಳು. ಮಾಡಿರುವ ದೌರ್ಜನ್ಯಗಳನ್ನು ಹಾಗೂ ಇತರೆ ಕೆಲವು ಐಪಿಎಸ್ ಅಧಿಕಾರಿಗಳ ಕರ್ಮಕಾಂಡವನ್ನು ಮತ್ತು ಕರ್ನಾಟಕದಲ್ಲಿ ಕನ್ನಡಿಗ ಅಧಿಕಾರಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಎಳೆಎಳೆಯಾಗಿ ತೆರೆದಿಡುವ ಸದುದ್ದೇಶದಿಂದ ಮುಕ್ತವಾಗಿ ಮಾತಾಡಿ, ಕರ್ಮಕಾಂಡ ಬಯಲು ಮಾಡಲು ಒಂದು ವಾರದೊಳಗೆ ಭೇಟಿಗೆ ಅವಕಾಶ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.