Thursday, April 23, 2026
ಜಿಲ್ಲೆಸುದ್ದಿ

ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ -ಕಹಳೆ ನ್ಯೂಸ್

ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ವಿಚಾರ ಪ್ರಾರಂಭ ಮಾಡುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ವಿಚಾರ ಪ್ರಾರಂಭ ಮಾಡುತ್ತೇನೆ. ಜಿಲ್ಲಾವಾರು ಹಿಂದುತ್ವದ ಸಭೆ ಮಾಡುತ್ತೇನೆ. ಕೋಲಾರ ಜಿಲ್ಲೆಯ ಐತಿಹಾಸಿಕ ವಿಘ್ನೇಶ್ವರ ದೇವಸ್ಥಾನದಿಂದ ಸಭೆ ಪ್ರಾರಂಭ ಮಾಡುತ್ತೇನೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಹಿಂದುತ್ವ, ನಿರುದ್ಯೋಗ, ಅಭಿವೃದ್ಧಿ ಮೂರು ಉದ್ದೇಶಗಳೊಂದಿಗೆ ಸಭೆ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಪ್ರಾದೇಶಿಕ ಪಕ್ಷ ಕಟ್ಟುವ ಬಗ್ಗೆ ಜನರ ಅಭಿಪ್ರಾಯ ಪಡೆಯುತ್ತೇನೆ. ಪ್ರಾದೇಶಿಕ ಪಕ್ಷ ಕಟ್ಟುವ ಚಿಂತನೆ ಪ್ರಾರಂಭವಾಗಿದೆ. ಮೇ ತಿಂಗಳಲ್ಲಿ ಒಳ್ಳೆಯ ಮುಹೂರ್ತ ನೋಡಿ ರಾಜ್ಯದಂತ ಪ್ರವಾಸ ಮಾಡುತ್ತೇನೆ ಎಂದು ತಿಳಿಸಿದರು.

ಮೊದಲು ಜಿಲ್ಲಾ ಕೇಂದ್ರ ನಂತರ ತಾಲೂಕು ಕೇಂದ್ರ ಪ್ರವಾಸ ಮಾಡುತ್ತೇನೆ. ಹಿಂದೂಪರ ಚಿಂತನೆ ಉಳ್ಳವರು ನಿರುದ್ಯೋಗಿ ಯುವಕರನ್ನ, ಅಭಿವೃದ್ಧಿ ಚಿಂತನೆ ಪರ ಇರುವ ಜನರ ಸಭೆ ಮಾಡುತ್ತೇನೆ. ಜನರ ಅಭಿಪ್ರಾಯ ಪಡೆದು ಮುಂದೆ ಪ್ರಾದೇಶಿಕ ಪಕ್ಷ ಕಟ್ಟುವ ಬಗ್ಗೆ ಚಿಂತನೆ ಮಾಡುತ್ತೇನೆ. ಚುನಾವಣೆ ಆಯೋಗ ಪಕ್ಷಕ್ಕೆ ಯಾವ ಚಿಹ್ನೆ ಕೊಡುತ್ತಾರೆ ನೋಡಬೇಕು ಎಂದು ಹೇಳಿದರು.