ಮಂಗಳೂರು : ಪಕ್ಷಾಂತರ ತಡೆ ಕಾಯ್ದೆ ಮೌಲ್ಯಮಾಪನ; ಒಡಿಶಾದಲ್ಲಿ ಸ್ಪೀಕರ್‌ಗಳ ಮಹತ್ವದ ಸಭೆ: ಯು.ಟಿ. ಖಾದರ್ -ಕಹಳೆ ನ್ಯೂಸ್

ಮಂಗಳೂರು : ಪಕ್ಷಾಂತರ ನಿಷೇಧ ತಿದ್ದುಪಡಿ ಕಾಯ್ದೆಯ ಮೌಲ್ಯಮಾಪನ ಹಾಗೂ ಬಲವರ್ಧನೆಗೆ ಸಂಬಂಧಿಸಿದಂತೆ ಲೋಕಸಭಾ ಸ್ಪೀಕರ್ ಮೂಲಕ ನೇಮಕಗೊಂಡ 5 ರಾಜ್ಯಗಳ ವಿಧಾನಸಭಾ ಅಧ್ಯಕ್ಷರ ಸಮಿತಿ ಸಭೆ ಒಡಿಶಾದ ಭುವನೇಶ್ವರದಲ್ಲಿ ಎ.22, 23ರಂದು ನಡೆಯಲಿದೆ ಎಂದು ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈ ಹಿಂದೆ ಮುಂಬಯಿಯಲ್ಲಿ ಒಂದು ಸಭೆ ನಡೆದಿತ್ತು. ಇದೀಗ ಎರಡನೇ ಸಭೆ ಒಡಿಶಾದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಒಡಿಶಾ, ಸಿಕ್ಕಿಂ, ಮಹಾರಾಷ್ಟ್ರ, ನಾಗಾಲ್ಯಾಂಡ್, ಕರ್ನಾಟಕ ಸೇರಿದಂತೆ 5 ರಾಜ್ಯಗಳ ಸ್ಪೀಕರ್‌ಗಳು ಭಾಗವಹಿಸಲಿದ್ದಾರೆ. ಒಂದು ವರ್ಷದ ಒಳಗೆ ಈ ಸಮಿತಿ ಲೋಕಸಭಾ ಅಧ್ಯಕ್ಷರಿಗೆ ವರದಿ ನೀಡಬೇಕಾಗಿದೆ ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.









