Thursday, April 23, 2026
ದೆಹಲಿರಾಜ್ಯಸುದ್ದಿ

ನಿಲ್ಲದ ಮಧ್ಯಪ್ರಾಚ್ಯ ಸಂಘರ್ಷ : ಭಾರತದಲ್ಲಿ LPG ಬಳಕೆ 13% ಕುಸಿತ -ಕಹಳೆ ನ್ಯೂಸ್

ನವದೆಹಲಿ: ಮಧ್ಯಪ್ರಾಚ್ಯ ಸಂಘರ್ಷ ಮುಂದುವರಿದಿದ್ದು, ಭಾರತದಲ್ಲಿ ಎಲ್‌ಪಿಜಿ (LPG) ಬಳಕೆ 13% ರಷ್ಟು ಕುಸಿತ ಕಂಡಿದೆ. ಯುದ್ಧದಿಂದಾಗಿ ಪೂರೈಕೆಯಲ್ಲಿ ಅಡಚಣೆ ಉಂಟಾಗಿರುವುದು ಎಲ್‌ಪಿಜಿ ಬಳಕೆ ತೀವ್ರ ಕುಸಿತಕ್ಕೆ ಕಾರಣವಾಗಿದೆ.
ಭಾರತದಲ್ಲಿ ಮಾರ್ಚ್‌ನಲ್ಲಿ ಎಲ್‌ಪಿಜಿ ಬಳಕೆ ಶೇ.13ರಷ್ಟು ಕುಸಿತವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಎಲ್‌ಪಿಜಿ 2.729 ದಶಲಕ್ಷ ಟನ್ ಬಳಕೆಯಾಗಿತ್ತು. ಆದರೆ, ಈ ವರ್ಷದ ಮಾರ್ಚ್‌ನಲ್ಲಿ 2.379 ದಶಲಕ್ಷ ಟನ್ ಬಳಕೆಯಾಗಿದೆ.

ಎಲ್‌ಪಿಜಿ ಅಭಾವ ಪರಿಣಾಮವು ಗೃಹೇತರ ವಿಭಾಗಗಳ ಮೇಲೆ ಹೆಚ್ಚು ತೀವ್ರವಾಗಿದೆ. ವಾಣಿಜ್ಯ ಬಳಕೆದಾರರಿಗೆ LPG ಮಾರಾಟವು ಸುಮಾರು ಶೇ.48 ರಷ್ಟು ಕುಸಿದಿದ್ದರೆ, ಬೃಹತ್ LPG ಬಳಕೆ ಶೇ.75.5 ರಷ್ಟು ಕುಸಿದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು