Sunday, June 14, 2026
ರಾಜ್ಯಸುದ್ದಿ

ನಾಳೆ ಪಿಎಂ ಮೋದಿ ಉದ್ಘಾಟಿಸಬೇಕಿದ್ದ 79,000 ಕೋಟಿ ಮೌಲ್ಯದ ತೈಲ ಶುದ್ಧೀಕರಣ ಘಟಕಕ್ಕೆ ಬೆಂಕಿ – ಕಹಳೆ ನ್ಯೂಸ್

ಜೈಪುರ: ನಾಳೆ (ಏ.21) ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಬೇಕಿದ್ದ ತೈಲ ಶುದ್ಧೀಕರಣ ಘಟಕಕ್ಕೆ ಬೆಂಕಿ ಬಿದ್ದಿದೆ.

ಜಾಹೀರಾತು

ಪ್ರಧಾನಿ ನರೇಂದ್ರ ಮೋದಿ, ರಾಜಸ್ಥಾನ ಸಿಎಂ ಬಜನ್ ಲಾಲ್ ಶರ್ಮಾ ಸೇರಿದಂತೆ ಪ್ರಮುಖ ನಾಯಕರು ನಾಳೆಯ 79,000 ಕೋಟಿ ಮೌಲ್ಯದ ತೈಲ ಶುದ್ಧೀಕರಣ ಘಟಕದ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು. ಸದ್ಯ ಅಗ್ನಿ ಅವಘಡದಲ್ಲಿ ರಿಫೈನರಿ ಘಟಕಕ್ಕೆ ಭಾರಿ ಹಾನಿಯಾಗಿದೆ. ಸದ್ಯ ಘಟಕಕ್ಕೆ ಬೆಂಕಿ ಬಿದ್ದಿರುವ ಪರಿಣಾಮ ನಾಳೆ ಮೋದಿ ಉದ್ಘಾಟನಾ ಕಾರ್ಯಕ್ರಮ ಮುಂದೂಡುವ ಸಾಧ್ಯತೆ ಇದೆ. ರಿಪೇರಿ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಉದ್ಘಾಟನೆ ಮಾಡುವ ಸಾಧ್ಯತೆ ಇದೆ. 

ರಾಜಸ್ಥಾನದ  ಬಲೋತ್ರದಲ್ಲಿ  79,000 ಕೋಟಿ ರೂ. ಮೊತ್ತದಲ್ಲಿ ಅಭಿವೃದ್ಧಿಪಡಿಸಿದ್ದ ಅತ್ಯಾಧುನಿಕ ತಂತ್ರಜ್ಞಾನದ ಹಾಗೂ ಸುಸಜ್ಜಿತ ತೈಲ ಶುದ್ಧೀಕರಣ ಘಟಕ ಇದಾಗಿದೆ. ಈ ಪಚಪದ್ರಾ ತೈಲ ಶುದ್ಧೀಕರಣ ಘಟಕವು ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ಹಾಗೂ ರಾಜಸ್ಥಾನ ಸರ್ಕಾರದ ಜಂಟಿ ಉದ್ಯಮವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು