Thursday, April 23, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶೃಂಗೇರಿ ಜಗದ್ಗುರುಗಳಿಗೆ ಗುರುವಂದನೆ : ನಾಳೆ ಪೂರ್ವಭಾವಿ ಸಭೆ -ಕಹಳೆ ನ್ಯೂಸ್

ಪುತ್ತೂರು: ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರಿಗೆ ಪುತ್ತೂರಿನಲ್ಲಿ ನಡೆಯಲಿರುವ ಗುರುವಂದನಾ ಕಾರ್ಯಕ್ರಮದ ಅಂಗವಾಗಿ ಏಪ್ರಿಲ್ 21ರಂದು ಸಂಜೆ 3 ಗಂಟೆಗೆ ಬಪ್ಪಳಿಗೆ ಅಂಬಿಕಾ ವಿದ್ಯಾಲಯದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.

ಗುರುವಂದನಾ ಸಮಿತಿ ಪದಾಧಿಕಾರಿಗಳು, ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು, ಶೃಂಗೇರಿ ಜಗದ್ಗುರುಗಳ ಶಿಷ್ಯವೃಂದ, ಭಕ್ತಾಭಿಮಾನಿಗಳು ಹಾಗೂ ಸಾರ್ವಜನಿಕರು ಈ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ಕೋರಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮೇ 6ರಂದು ಸಂಜೆ ಜಗದ್ಗುರುಗಳು ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಲಿದ್ದು, ಮೇ 7ರಂದು ಸಾರ್ವಜನಿಕ ಅಭಿವಂದನಾ ಕಾರ್ಯಕ್ರಮ ನಡೆಯಲಿದೆ.

ಈಗಾಗಲೇ ಗುರುವಂದನಾ ಸಮಿತಿ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.