Thursday, April 23, 2026
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸುದ್ದಿ

ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್‌ : ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ -ಕಹಳೆ ನ್ಯೂಸ್

ಬೆಂಗಳೂರು: ನಗರದಲ್ಲಿ ಜೀವಂತ ಗ್ರೆನೇಡ್‌ ಪತ್ತೆ ಪ್ರಕರಣದ ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟವಾಗಲಿದೆ.

ನಗರದಲ್ಲಿ 2008ರ ಮಾದರಿಯಲ್ಲಿ ಸ್ಫೋಟ ನಡೆಸಲು ಆರೋಪಿಗಳು ಸಂಚು ರೂಪಿಸಿದ್ದರು. ಆರ್‌ಟಿ ನಗರದ ಮನೆಯಲ್ಲಿ ಜೀವಂತ ಗ್ರೆನೇಡ್, ಪಿಸ್ತೂಲ್, ಗುಂಡುಗಳು ವಶಕ್ಕೆ ಪಡೆಯಲಾಗಿತ್ತು. 2023 ರಲ್ಲಿ ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಖಚಿತ ಮಾಹಿತಿ‌ ಮೇರೆಗೆ ಸಿಸಿಬಿ ದಾಳಿ ನಡೆಸಿತ್ತು. ಸ್ಫೋಟಕ ವಸ್ತುಗಳು, ವಾಕಿ ಟಾಕಿ, ಮ್ಯಾಪನ್ನು ವಶಪಡಿಸಿಕೊಳ್ಳಲಾಗಿತ್ತು. ನಂತರ ಪ್ರಕರಣ ಎನ್ಐಎ ಕೈಗೆತ್ತಿಕೊಂಡು ವಿಚಾರಣೆ ಮಾಡಿತ್ತು. ಬೆಂಗಳೂರು ಸ್ಫೋಟದ ರೂವಾರಿ ಟಿ. ನಾಜೀರ್ ಜೊತೆ ಆರೋಪಿಗಳು ಸಂಪರ್ಕ ಹೊಂದಿದ್ದರು.

ಜೈಲಿನಲ್ಲಿ ನಾಜೀರ್‌ನಿಂದ ಉಗ್ರವಾದಕ್ಕೆ ಪ್ರೇರಣೆ ಇತ್ತು. ಜೈಲಿನಿಂದ ಹೊರಬಂದ ಬಳಿಕ ವಿವಿಧೆಡೆ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಿದ್ದ. 2023 ರಲ್ಲಿ ಸಂಚು ರೂಪಿಸುತ್ತಿದ್ದ ವೇಳೆ ಆರೋಪಿಗಳ ಸೆರೆ ಹಿಡಿಯಲಾಗಿತ್ತು. ಪ್ರಕರಣದಲ್ಲಿ ಎ1 ಟಿ ನಾಜೀರ್, ಎ2 ಜುನೈದ್, ಎ3 ಸೈಯಾದ್ ಸುಹೈಲ್ ಖಾನ್, ಎ4 ಮಹಮ್ಮದ್ ಉಮರ್, ಎ5 ಜಾಹಿದ್ ತಬ್ರೇಜ್, ಎ6 ಸೈಯದ್, ಎ7 ಮುದಾಸೀರ್ ಪಾಷಾ, ಎ8 ಮಹಮ್ಮದ್ ಫಜೀದ್, ಎ9 ಅನೀಸ್ ಫಾತೀಮ್, ಎ10 ಚಾನ್ ಪಾಷಾ, ಎ11 ವೈದ್ಯ ಡಾ. ನಾಗರಾಜ್ ಬಂಧನವಾಗಿದೆ.

ಅರೋಪಿಗಳ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿತ್ತು. ಎನ್ಐಎ ಪರವಾಗಿ SPP ಪ್ರಸನ್ನ ಕುಮಾರ್ ವಾದ ಮಂಡಿಸಿದ್ದರು. ವಾದ-ಪ್ರತಿವಾದ ಆಲಿಸಿ ಎನ್ಐಎ ವಿಶೇಷ ಕೋರ್ಟ್ ತೀರ್ಪು ಕಾದಿರಿಸಿತ್ತು. ಇಂದು ಮಧ್ಯಾಹ್ನದ ನಂತರ ಎನ್‌ಐಎ ಕೋರ್ಟ್‌ ತೀರ್ಪು ಪ್ರಕಟಿಸಲಿದೆ.