Thursday, April 23, 2026
ಬೆಂಗಳೂರುರಾಜ್ಯಸುದ್ದಿ

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ -ಕಹಳೆ ನ್ಯೂಸ್

ಬೆಂಗಳೂರು: ಹಿಂದಿ ಸೇರಿದಂತೆ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ ಎಂದು ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ಸಂಬಂಧ 2025ರ ಅಕ್ಟೋಬರ್ 28ರಂದು ಸುತ್ತೋಲೆ ಹೊರಡಿಸಲಾಗಿದೆ. ಬಳಿಕ 2026ರ ಮಾರ್ಚ್ 18- ಏಪ್ರಿಲ್ 2 ರವರೆಗೆ ಪರೀಕ್ಷೆ ನಡೆದಿದೆ. ದಿನಪತ್ರಿಕೆ ವರದಿ ಆಧಾರದ ಮೇಲೆ ಅರ್ಜಿ ವಜಾ ಆಗಿದೆ ಎಂದು ವಾದಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಎಲ್ಲರನ್ನೂ ಪಾಸು ಮಾಡುವ ನಿಮ್ಮ ಉದ್ದೇಶ ಸರಿ ಇರಬಹುದು. ಅದು ಕೇಳಲು ಚೆನ್ನಾಗಿದೆ. ಈ ವರ್ಷ ಹೀಗೆ ಇರಲಿ. ಮುಂದಿನ ವರ್ಷದಿಂದ ನೀವು ಇದನ್ನು ಮಾಡಬಹುದು. ಮುಂದಿನ ವರ್ಷ ಅಗತ್ಯ ಕ್ರಮ ತೆಗೆದುಕೊಳ್ಳಬಹುದು ಅಲ್ವಾ ಎಂದು ಹೇಳಿದ ಜಡ್ಜ್, ಅಂಕಗಳನ್ನು ನೀಡಲು ನಿರ್ದೇಶಿಸಿದರು.

ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆದಿದೆ. ಏಪ್ರಿಲ್ 10 ರಂದು ಕರಡು ನಿಯಮಗಳನ್ನು ರೂಪಿಸಲಾಗಿದೆ. ಹೀಗಾಗಿ, ತನ್ನ ಆದೇಶ ಮರುಪರಿಶೀಲಿಸಲು ಹೈಕೋರ್ಟ್ ನಿರಾಕರಿಸಿದೆ.