Recent Posts

Sunday, June 7, 2026
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ಮಂಡಲದ ಸಭೆ: ನೂತನ ಪದಾಧಿಕಾರಿಗಳ ನೇಮಕ -ಕಹಳೆ ನ್ಯೂಸ್

ಬೆಳ್ತಂಗಡಿ : ಎ 21 ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಯುವಮೋರ್ಚಾ ಮಂಡಲ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಎಪ್ರಿಲ್ 21 ರಂದು ಪಕ್ಷದ ಕಚೇರಿಯಲ್ಲಿ ಸಭೆ,ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನೆರವೇರಿತು.

ಜಾಹೀರಾತು

ಈ ಸಂದರ್ಭದಲ್ಲಿ ಮಂಡಲ ಯುವಮೋರ್ಚಾ ಪ್ರಭಾರಿ ಸುರೇಶ್ ಕೋಟ್ಯಾನ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ. ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಭರತ್ ಕೃಷ್ಣಾಪುರ ಇವರುಗಳು ಉಪಸ್ಥಿತರಿದ್ದರು. ಮುಂದಿನ ಸಂಘಟನೆಯ ವಿಚಾರವಾಗಿ ಚರ್ಚಿಸಲಾಯಿತು. ಮಂಡಲ ಯುವಮೋರ್ಚಾ ನೂತನವಾಗಿ ಪದಾಧಿಕಾರಿಗಳಾಗಿ ನೇಮಕ ಗೊಂಡಿರುವ ಉಪಾಧ್ಯಕ್ಷರಾಗಿ ಹರೀಶ್ ಸoಬೋಲ್ಯ, ಕಾರ್ಯದರ್ಶಿಯಾಗಿ ಜಗದೀಶ್ ಕನ್ನಾಜೆ.ಹಾಗೂ ಸದಸ್ಯರುಗಳಾಗಿ ಮನೀಶ್ ಡಿ. ಎ ಧರ್ಮಸ್ಥಳ, ಸಂತೋಷ್ ಪೂಜಾರಿ ಇಂದಬೆಟ್ಟು ಇವರುಗಳಿಗೆ ಅಧಿಕಾರ ಹಸ್ತಾಂತರಿಸಲಾಯಿತು.,ಪಕ್ಷ ಸಂಘಟನೆಯ ಬಗ್ಗೆ ಮಾಹಿತಿ ನೀಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ ಸ್ವಾಗತಿಸಿದರು,ಮಂಡಲ ಯುವಮೋರ್ಚಾ ಉಪಾಧ್ಯಕ್ಷರಾದ ಗಣೇಶ್ ಲಾಯಿಲ ಧನ್ಯವಾದವಿತ್ತರು.