Recent Posts

Sunday, June 7, 2026
ಜಿಲ್ಲೆಸುದ್ದಿಹಾಸನ

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ : ಗಾರ್ಡ್‌ ಸ್ಥಿತಿ ಗಂಭೀರ  -ಕಹಳೆ ನ್ಯೂಸ್

ಹಾಸನ: ಮೂವರು ಇಟಿಎಫ್  ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ.


ಗ್ರಾಮದ ಹಾಸ್ಟೆಲ್ ಹಿಂಭಾಗ ಕಾಡಾನೆ ದಾಳಿ ನಡೆಸಿದೆ. ದಾಳಿಯಲ್ಲಿ ಗಾಯಗೊಂಡ ಗಾರ್ಡ್ ರಮೇಶ್ ಸ್ಥಿತಿ ಗಂಭೀರವಾಗಿದೆ. ಸಿಬ್ಬಂದಿ ವಿಶ್ವ ಹಾಗೂ ಜೀವನ್‌ ಅವರು ಸಹ ದಾಳಿಯಲ್ಲಿ ಗಾಯಗೊಂಡಿದ್ದಾರೆ.

ಜಾಹೀರಾತು

ಕಾಡಾನೆಗಳ ಹೆಜ್ಜೆ ಗುರುತು ನೋಡಿಕೊಂಡು, ಚಲನವಲನ ಗಮನಿಸುತ್ತ ರಮೇಶ್, ವಿಶ್ವ ಹಾಗೂ ಜೀವನ್ ತೆರಳುತ್ತಿದ್ದರು. ಈ ವೇಳೆ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಮೂವರು ಗಾಯಾಳುಗಳನ್ನು ಹಾಸನ (Hassan) ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಅರಣ್ಯ ಇಲಾಖೆ (Forest Department) ಅಧಿಕಾರಿಗಳು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು