Sunday, April 26, 2026
ದೆಹಲಿರಾಜ್ಯಸುದ್ದಿ

ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ: ಮೋದಿ -ಕಹಳೆ ನ್ಯೂಸ್

ನವದೆಹಲಿ: ವಾಷಿಂಗ್ಟನ್‌ನ  ಹಿಲ್ಟನ್ ಹೋಟೆಲ್‌ನಲ್ಲಿ  ಡೊನಾಲ್ಡ್ ಟ್ರಂಪ್  ಭಾಗವಹಿಸಿದ್ದ ಡಿನ್ನರ್ ಕಾರ್ಯಕ್ರದಲ್ಲಿ ಗುಂಡಿನ ದಾಳಿ ನಡೆದ ಘಟನೆ ಕುರಿತು ಪ್ರಧಾನಿ ಮೋದಿ  ಪ್ರತಿಕ್ರಿಯಿಸಿ, ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ ಎಂದಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ವಾಷಿಂಗ್ಟನ್ ಡಿಸಿ ಹೋಟೆಲ್‌ನಲ್ಲಿ ನಡೆದ ಭದ್ರತಾ ಲೋಪದ ಘಟನೆಯ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪತ್ನಿ ಮೆಲಾನಿಯ ಮತ್ತು ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ ಸುರಕ್ಷಿತವಾಗಿದ್ದಾರೆ ಎಂದು ತಿಳಿದು ನಿರಾಳವಾಯಿತು. ಅವರ ಸುರಕ್ಷತೆ ಹಾಗೂ ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ. ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ ಮತ್ತು ಅದನ್ನು ಸ್ಪಷ್ಟವಾಗಿ ಖಂಡಿಸಬೇಕು ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ದಾಳಿ ಸಂಬಂಧ ಶಂಕಿತ ದಾಳಿಕೋರನನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಟ್ರಂಪ್ ಅವರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿತ್ತೇ ಎಂಬುದು ತನಿಖೆಯ ಬಳಿಕವಷ್ಟೇ ತಿಳಿದು ಬರಲಿದೆ.