Monday, April 27, 2026
ಜಿಲ್ಲೆದಕ್ಷಿಣ ಕನ್ನಡಸುದ್ದಿ

ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ -ಕಹಳೆ ನ್ಯೂಸ್

ಪುರಿಯ-ಮಾಲಾಡಿ, ಪುಂಜಾಲ ಕಟ್ಟೆ-  ಮಡಂತ್ಯಾರು, ಕುಕ್ಕೇಡಿ ಭಾಗದ ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯಾಗಿದ್ದ ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಯಿತು.

ಈ ಮಹತ್ವದ ಕಾಮಗಾರಿಗಾಗಿ ರೂ.50.00 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಲಾಗಿದ್ದು, ಮಂಗಳೂರು ಕಾವೂರು ಮೂಲದ ಮುಗೆರೋಡಿ ಕನ್ಸ್ಟ್ರಕ್ಷನ್ ಸಂಸ್ಥೆಯವರು ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಮೇಲ್ವಿಚಾರಣೆಯಲ್ಲಿ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕ ಶ್ರೀ ಹರೀಶ್ ಪೂಂಜ ಅವರು, “ಜನರ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ಈ ರಸ್ತೆ ಕಾಮಗಾರಿಯಿಂದ ಈ ಭಾಗದ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಲಭಿಸಿ, ದೈನಂದಿನ ಜೀವನಕ್ಕೆ ಹೆಚ್ಚಿನ ಅನುಕೂಲವಾಗಲಿದೆ” ಎಂದು ತಿಳಿಸಿದ್ದಾರೆ.

ಇದೇ ವೇಳೆ ಕಾಮಗಾರಿಗೆ ಸಾರ್ವಜನಿಕರು ಸಹಕಾರ ನೀಡುವಂತೆ ಅವರು ವಿನಂತಿಸಿದರು