Tuesday, April 28, 2026
ಬೆಂಗಳೂರುರಾಜ್ಯಸುದ್ದಿ

ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : ಬೆಂಗ್ಳೂರಲ್ಲಿ 6 ವಿದೇಶಿ ಮಹಿಳೆಯರು ವಶಕ್ಕೆ-ಕಹಳೆ ನ್ಯೂಸ್

ಬೆಂಗಳೂರು: ನಗರದ ಕೋರಮಂಗಲ  ಚೆಕ್‌ಪೋಸ್ಟ್‌ ಬಳಿ ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ ನೀಡುತ್ತಿದ್ದ 6 ವಿದೇಶಿ ಮಹಿಳೆಯರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ರಸ್ತೆಯಲ್ಲಿ ನಿಂತು ಆರು ಮಹಿಳೆಯರು ಪುರುಷರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದಾರೆ. 6 ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ವಿದೇಶಿ ಮಹಿಳೆಯರ ಬಳಿ ಇರುವ ಪಾಸ್‌ಪೋರ್ಟ್, ವೀಸಾ ಪರಿಶೀಲನೆ ನಡೆಸಲಾಗುತ್ತಿದೆ. ಈ ಸಂಬಂಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.