
ಚಿಕ್ಕಮಗಳೂರು: ಟ್ರ್ಯಾಕ್ಟರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಏಳು ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಚಿಕ್ಕಮಗಳೂರು ತಾಲೂಕಿನ ಸಂಗಮೇಶ್ವರ ಪೇಟೆಯಲ್ಲಿ ನಡೆದಿದೆ.
ಮೃತ ಬಾಲಕ ಸ್ಥಳಿಯ ಪೂರ್ಣ ಪ್ರಜ್ಞಾ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದನು. ಬಾಲಕನ ತಂದೆ ಸಲೀಂ ಸ್ಥಿತಿ ಕೂಡ ಗಂಭೀರವಾಗಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಲೀಂ ಮಗನನ್ನ ಶಾಲೆಯಿಂದ ಮನೆಗೆ ಕರೆದುಕೊಂಡು ಮನೆ ಬಳಿ ರೋಡ್ ಕ್ರಾಸ್ ಮಾಡುವಾಗ ಮನೆ ಮುಂದೆಯೇ ಈ ದುರ್ಘಟನೆ ಸಂಭವಿಸಿದೆ.
ಟ್ರ್ಯಾಕ್ಟರ್ ವೇಗವಾಗಿ ಬಂದಿದ್ದೆ ಈ ಅವಘಡಕ್ಕೆ ಕಾರಣ ಎಂದು ಹೇಳಲಾಗ್ತಿದೆ. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
















