Monday, May 4, 2026
ಜಿಲ್ಲೆಸುದ್ದಿ

ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ಬ್ಯಾನ್‌! -ಕಹಳೆ ನ್ಯೂಸ್

ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ  ಚುನಾವಣಾ ಫಲಿತಾಂಶ  ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ‍್ಯಾಲಿ (Victory Rallies) ನಡೆಸುವುದನ್ನು ಆಯೋಗ ನಿಷೇಧಿಸಿದೆ. ವಿಶೇಷ ವೀಕ್ಷಕ ಸುಬ್ರತಾ ಗುಪ್ತಾ ಅವರು ಈ ನಿರ್ಬಂಧವನ್ನು ದೃಢಪಡಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಪಶ್ಚಿಮ ಬಂಗಾಳ
ರಾಜಕೀಯ ಕುತೂಹಲದ ಕೇಂದ್ರ ಪಶ್ಚಿಮ ಬಂಗಾಳದ 294 ವಿಧಾನಸಭೆಗಳಿಗೆ ಏ.23 ಮತ್ತು 29 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಿತು. ಒಟ್ಟು 2,926 ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಮೊದಲ ಹಂತದ ಚುನಾವಣೆಗೆ 152 ಸ್ಥಾನಗಳಲ್ಲಿ 1,487 ಹಾಗೂ ಎರಡನೇ ಹಂತದ ಚುನಾವಣೆಗೆ 142 ಕ್ಷೇತ್ರಗಳಲ್ಲಿ ಒಟ್ಟು 1,448 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಮೊದಲ ಹಂತದಲ್ಲಿ 93.19% ಹಾಗೂ ಎರಡನೇ ಹಂತದಲ್ಲಿ 92.47% ಮತದಾನ ನಡೆಯಿತು. ಈ ರಾಜ್ಯ ಎಸ್‌ಐಆರ್‌ ಬಳಿಕ ಚುನಾವಣೆ ಎದುರಿಸಿದೆ. ಯಾವುದೇ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು 148 ಸೀಟ್‌ಗಳ ಬಹುಮತ ಬೇಕಿತ್ತು. ಈ ಬಾರಿ 385 ಮಹಿಳೆಯರು ಸ್ಪರ್ಧಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (TMC): 215 ಸ್ಥಾನಗಳನ್ನು ಗೆದ್ದು ಪ್ರಚಂಡ ಬಹುಮತ ಸಾಧಿಸಿತ್ತು. ಭಾರತೀಯ ಜನತಾ ಪಕ್ಷ (BJP): 77 ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರಬಲ ವಿರೋಧ ಪಕ್ಷವಾಗಿ ಹೊರಹೊಮ್ಮಿತ್ತು. ಇತರರು: ರಾಷ್ಟ್ರೀಯ ಸೆಕ್ಯುಲರ್ ಮಜ್ಲಿಸ್ ಪಾರ್ಟಿ (RSMP) 1 ಸ್ಥಾನ ಮತ್ತು ಪಕ್ಷೇತರ ಅಭ್ಯರ್ಥಿ 1 ಸ್ಥಾನ ಗೆದ್ದಿದ್ದರು. ಕಾಂಗ್ರೆಸ್ ಮತ್ತು ಎಡರಂಗ: ಈ ಚುನಾವಣೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಯಾವುದೇ ಸ್ಥಾನವನ್ನು ಗೆಲ್ಲಲು ಸಾಧ್ಯವಾಗಿರಲಿಲ್ಲ.