ಜೈಲಲ್ಲಿ ದರ್ಶನ್‌ಗೆ ಮೂಲಸೌಕರ್ಯ : 1 ವಾರದೊಳಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ -ಕಹಳೆ ನ್ಯೂಸ್

ಬೆಂಗಳೂರು: ನಟ ದರ್ಶನ್‌ಗೆ ಜೈಲಿನಲ್ಲಿ ಮೂಲಸೌಕರ್ಯ ಒದಗಿಸಲಾಗಿದೆಯೇ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.
ದರ್ಶನ್‌ಗೆ ಜೈಲಿನಲ್ಲಿ ಮೂಲಸೌಕರ್ಯ ನೀಡಿಲ್ಲ. ದರ್ಶನ್ ಅವರನ್ನು ಬೆಳಕು ಇಲ್ಲದ ಸೆಲ್‌ನಲ್ಲಿ ಇರಿಸಲಾಗಿದೆ ಎಂದು ಹಿರಿಯ ವಕೀಲ ಮುಕುಲ್ ರೋಹಟಗಿ ವಾದಿಸಿದ್ದರು. ವಾದ ಆಲಿಸಿದ ನ್ಯಾಯಾಲಯ ಈವರೆಗೆ ಎಷ್ಟು ಸಾಕ್ಷಿಗಳ ವಿಚಾರಣೆಯಾಗಿದೆ. ಇನ್ನು ಉಳಿದ ಸಾಕ್ಷ್ಯಗಳ ವಿಚಾರಣೆ ಪ್ರಕ್ರಿಯೆಗೆ ಎಷ್ಟು ಸಮಯ ಬೇಕು ಎಂಬುದರ ಬಗ್ಗೆ ಒಂದು ವಾರದಲ್ಲಿ ವರದಿ ನೀಡುವಂತೆ ಸೂಚನೆ ನೀಡಿದೆ.









