Wednesday, May 6, 2026
ಸುದ್ದಿ

ವಸತಿ ಕಟ್ಟಡಕ್ಕೆ ಡಿಕ್ಕಿ ಹೊಡೆದು ವಿಮಾನ ಪತನ : ಪೈಲಟ್ ಸೇರಿ ಮೂವರು ಸಾವು – ಇಬ್ಬರ ಸ್ಥಿತಿ ಗಂಭೀರ -ಕಹಳೆ ನ್ಯೂಸ್

ಬ್ರೆಸಿಲಿಯಾ: ಬ್ರೆಜಿಲ್‌ನ ಬೆಲೊ ಹೊರಿಜಾಂಟೆಯಲ್ಲಿ  ಸಣ್ಣ ವಿಮಾನವೊಂದು ವಸತಿ ಕಟ್ಟಡಕ್ಕೆ ಡಿಕ್ಕಿ (Plane Crash) ಹೊಡೆದ ಪರಿಣಾಮ ಪೈಲಟ್ ಸೇರಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ವಿಮಾನದಲ್ಲಿ ಐದು ಜನರು ಪ್ರಯಾಣಿಸುತ್ತಿದ್ದರು. ನಗರ ಕೇಂದ್ರದಿಂದ ಸುಮಾರು 8 ಕಿ.ಮೀ ದೂರದಲ್ಲಿರುವ ಪಂಪುಲ್ಹಾ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಸ್ವಲ್ಪ ಸಮಯದ ನಂತರ ಈ ಘಟನೆ ಸಂಭವಿಸಿದೆ. ಸಾವೊ ಪಾಲೊಗೆ ತೆರಳುತ್ತಿದ್ದ ವಿಮಾನ ಪತನಗೊಂಡಿದೆ.

ಅಪಘಾತದಲ್ಲಿ ಪೈಲಟ್ ಮತ್ತು ಸಹ-ಪೈಲಟ್ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ವಿಮಾನ ಕಟ್ಟಡಕ್ಕೆ ಡಿಕ್ಕಿ ಹೊಡೆದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು