Recent Posts

Saturday, May 9, 2026
ಉಡುಪಿದಕ್ಷಿಣ ಕನ್ನಡಮಂಗಳೂರುಮುಂಬೈಶುಭಾಶಯಸುದ್ದಿ

ತುಳುನಾಡ ಅಳಿಯ, ಟೀಂ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ದಂಪತಿಗೆ ಹೆಣ್ಣು ಮಗು ಜನನ – ಕಹಳೆ ನ್ಯೂಸ್

ಮುಂಬೈ: ತುಳುನಾಡ ಅಳಿಯ, ಟೀಂ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ  ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಈ ಕುರಿತು ಸೂರ್ಯಕುಮಾರ್ ಯಾದವ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಗು, ಕನಸುಗಳೊಂದಿಗೆ ನಾವು ಹೆಣ್ಣು ಮಗುವನ್ನು ಸ್ವಾಗತಿಸಿದ್ದೇವೆ ಎಂದು ಬರೆದುಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

 

ಕಾಲೇಜು ದಿನಗಳಲ್ಲಿ ಪರಿಚಯವಾಗಿ ಪ್ರೀತಿಯಲ್ಲಿ ಬಿದ್ದಿದ್ದ ಈ ಜೋಡಿ 2016ರಲ್ಲಿ ವಿವಾಹವಾಗಿದ್ದರು. ಮದುವೆಯಾಗಿ 10 ವರ್ಷಗಳ ಬಳಿಕ ಈ ದಂಪತಿ ಗುರುವಾರ ತಮ್ಮ ಮೊದಲ ಮಗುವಿಗೆ ಸ್ವಾಗತ ಕೋರಿದ್ದಾರೆ. ಅಭಿಮಾನಿಗಳು ಹಾಗೂ ಕ್ರಿಕೆಟ್ ವಲಯದ ಸದಸ್ಯರಿಂದ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳು ಹರಿದುಬರುತ್ತಿದೆ.

.