ಸುಲ್ತಾನ್ ಬತ್ತೇರಿ – ತಣ್ಣೀರು ಬಾವಿ ಬೋ ಸ್ಟಿಂಗ್ ಸೇತುವೆ ಕಾಮಗಾರಿ ಸೆಪ್ಟೆಂಬರ್‌ಗೆ ಪೂರ್ಣ: ಸಚಿವ ದಿನೇಶ್ ಗುಂಡೂರಾವ್ – ಕಹಳೆ ನ್ಯೂಸ್

ಸುಲ್ತಾನ್ ಬತ್ತೇರಿ ಬಳಿ ಫಲ್ಗುಣಿ ನದಿಯಿಂದ ತಣ್ಣೀರುಬಾವಿ ಸಂಪರ್ಕಸುವ ಅತ್ಯಾಧುನಿ ತಂತ್ರಜ್ಞಾನದ ಬೋ ಸ್ಟಿಂಗ್ ಸೇತುವೆ ಕಾಮಗಾರಿ ಸೆಪ್ಟೆಂಬರ್‌ಗೆ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.
ಸುಲ್ತಾನ್ ಬತ್ತೇರಿಯಿಂದ ತಣ್ಣೀರುಬಾವಿಗೆ ಸಂಪರ್ಕ ಕಲ್ಪಿಸುವ ಸೇತುವೆಯ ಕಾಮಗಾರಿ ಶೀಘ್ರಗತಿಯಲ್ಲಿ ನಡೆಯು ತ್ತಿದ್ದು ಸ್ಥಳೀಯರು ನಗರ ಪ್ರವೇಶಕ್ಕೆ ಸುಲಭವಾಗಲಿದೆ. ಪ್ರಸ್ತುತ ಇಲ್ಲಿನ ಜನರು ಫೆರ್ರಿ ಮೂಲಕ ಅಥವಾ ಸುತ್ತು ಬಳಸಿ ಸುಮಾರು ಅರ್ಧ ಗಂಟೆ ವ್ಯಯಿಸಿ ನಗರ ಪ್ರದೇಶಕ್ಕೆ ಸಂಚಾರ ಮಾಡಬೇಕಾಗಿದೆ. ಸ್ಮಾರ್ಟ್ ಸಿಟಿ ಯೋಜನೆ ಯಡಿ 64 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿ ನಿರ್ಮಾಣವಾಗುತ್ತಿದೆ. ಇದರಿಂದ ಬೆಂಗ್ರೆ ಪ್ರದೇಶದ ಸುಮಾರು 4000 ಕುಟುಂಬಗಳಿಗೆ ಪ್ರಯೋಜನವಾಗಲಿದೆ ಎಂದು ಅವರು ಹೇಳಿದರು.
ಇಲ್ಲಿ ದೋಣಿಗಳು ಯಾವುದೇ ಅಡಚಣೆ ಇಲ್ಲದೆ ಸಂಚರಿಸಲು ವ್ಯವಸ್ಥೆ ಆಗಲಿದೆ. ಆಕರ್ಷಣೀಯವಾಗಿ ಸೇತುವೆ ಕಾಮಗಾರಿಯನ್ನು ನಡೆಸಲಾಗುತ್ತಿದ್ದು ಜೂನ್ ತಿಂಗಳ ವೇಳೆಗೆ ಬೋ ಸ್ಟಿಂಗ್ ಮೇಲೆತ್ತುವ ಕಾರ್ಯ ನಡೆಯಲಿಗು ಬಳಿಕ ದೋಣಿಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು. ಸೆಪ್ಟೆಂಬರ್ ವೇಳೆಗೆ ಸೇತುವೆ ಲೋಕಾರ್ಪಣೆಗೆ ಗುರಿ ಸಿ ಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ನೀರಿನ ಆಳ ಹಾಗೂ ಸೇತುವೆಯ ಎತ್ತರ ಇಲ್ಲಿ ಯಾವುದೇ ರೀತಿಯ ಸಹಜ ಚಟುವಟಿಕೆಗಳಿಗೆ ತೊಂದರೆ ಆಗದಂತೆ ರಾಷ್ಟ್ರೀಯ ಜಲಮಾರ್ಗ ಮಾರ್ಗಸೂಚಿಯಡಿ ಮಾಡಲಾಗುತ್ತಿದೆ. ಸೇತುವೆಯಲ್ಲಿ ಎಲ್ಲಾ ವಾಹನಗಳು ಓಡಾಟಕ್ಕೆ ಅನುಕೂಲವಾಗುವ ರೀತಿಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಮಂಗಳೂರು ನಗರಕ್ಕೆ ಇದೊಂದು ಪ್ರಮುಖ ಹಾಗೂ ಮಹತ್ವದ ಯೋಜನೆ ಎಂದವರು ಹೇಳಿದರು.
ಬ್ಲೂಫ್ಲಾಗ್ ಬೀಚ್‌ಗೂ ಈ ಸೇತುವೆ ಎರಡನೆ ಸಂಪರ್ಕ ರಸ್ತೆಯಾಗಿ ಬಳಕೆಯಾಗಲಿದೆ. ಇದರಿಂದ ಪ್ರವಾಸೋದ್ಯಕ್ಕೂ ಒತ್ತು ನೀಡಿದಂತಾಗುತ್ತದೆ. ಸ್ಥಳೀಯ ಜನರ ಸಂಚಾರದ ಜತೆಗೆ ವಾಣಿಜ್ಯ ಹಾಗೂ ಪ್ರವಾಸೋದ್ಯಮ ಚಟುವಟಿಕೆಗಳಿಗೂ ಈ ಸೇತುವೆಯಿಂದ ಸಹಕಾರವಾಗಲಿದೆ ಎಂದು ಅವರು ಹೇಳಿದರು.
ಮಳೆ ಮತ್ತು ಕುಡಿಯುವ ನೀರಿಗೆ ಸಂಬಂಧಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಈಗಾಗಲೇ ಸೂಚನೆ ನೀಡಲಾ ಗಿದೆ. ಪ್ರವಾಹ ಸಾಧ್ಯತೆಯ ಸಂದರ್ಭ ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ವಿವಿಧ ಇಲಾಖೆಗಳ ಅಧಿಕಾರಿಗಳ ಜತೆ ಸಭೆ ನಡೆಸಿ . ನಿರ್ದೇಶನ ನೀಡಲಾಗಿದೆ. ಹಿಂದಿನ ಅವಧಿಯಲ್ಲಿ ಆದ ಪ್ರವಾಹ, ಕೃತಕ ನೆರೆ, ಭೂ ಕುಸಿತಗಳ ಜಾಗಗಳ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮಗಳೊಂದಿಗೆ ಸಜ್ಜಾಗಿರಲು ಸೂಚಿಸಲಾಗಿದೆ. ತಡೆಗೋಡೆ ಗಳ ನಿರ್ಮಾಣಕ್ಕೆ 80 ಕೋಟಿ ರೂ. ಅನುದಾನ ದೊರಕಿದ್ದು, ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಹೂಳೆತ್ತುವ ಕಾಮಗಾರಿಗೆ 9 ಕೋಟಿ ರೂ. ವೆಚ್ಚದಲ್ಲಿ ಆರಂಭಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.









