Saturday, May 9, 2026
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಆರಂಭ : ಒಂದೇ ತಿಂಗಳಲ್ಲಿ ಬರೋಬ್ಬರಿ 600 ವಾಹನಗಳ ಎತ್ತಂಗಡಿ – ಕಹಳೆ ನ್ಯೂಸ್ 

ಬೆಂಗಳೂರು: ನಾಲ್ಕು ವರ್ಷದ ಬಳಿಕ ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್‌  ಆರಂಭವಾಗಿದೆ. ಇದೀಗ ಒಂದೇ ತಿಂಗಳಲ್ಲಿ ಬರೋಬ್ಬರಿ 600 ವಾಹನಗಳನ್ನು ಟೋಯಿಂಗ್‌ ಮಾಡಿದ್ದಾರೆ.

ತಿಂಗಳ ಹಿಂದೆ ನಗರದ ಮೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಟೋಯಿಂಗ್ ಆರಂಭ ಮಾಡಲಾಗಿತ್ತು. ನೋ ಪಾರ್ಕಿಂಗ್, ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಪಾರ್ಕ್‌ ಮಾಡಿರುವ ವಾಹನಗಳನ್ನು ಟೋಯಿಂಗ್ ಮಾಡಲಾಗುತ್ತಿದೆ. ಪ್ರತಿದಿನ 60 ರಿಂದ 70 ವಾಹನಗಳ ಟೋಯಿಂಗ್ ಮಾಡುತ್ತಿದ್ದು, ಒಂದೇ ತಿಂಗಳಲ್ಲಿ ಬರೋಬ್ಬರಿ 600 ವಾಹನಗಳನ್ನು ಟೋಯಿಂಗ್ ಮಾಡಿ, ದಂಡ ವಿಧಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸದ್ಯ ಮೂರು ಪಾಲಿಕೆಯಲ್ಲಿ ಮಾತ್ರ ಟೋಯಿಂಗ್ ಮಾಡಲಾಗುತ್ತಿದ್ದು, ಇನ್ನೂ ಎರಡು ಪಾಲಿಕೆ ವ್ಯಾಪ್ತಿಯಲ್ಲಿ ಟೋಯಿಂಗ್ ಆರಂಭಿಸಬೇಕಿದೆ ಸದ್ಯ ಯಾವುದೇ ತಾಂತ್ರಿಕ ಸಮಸ್ಯೆ ಬಗ್ಗೆ ವರದಿಯಾಗಿಲ್ಲ. ಪೊಲೀಸರು ಮತ್ತು ಜಿಬಿಎ ಸಿಬ್ಬಂದಿ ಜಂಟಿಯಾಗಿ ಟೋಯಿಂಗ್ ಮಾಡುತ್ತಿದ್ದಾರೆ.