Monday, May 11, 2026
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕ್ಯಾಂಟೀನ್ ಹೆಸರಲ್ಲಿ ವೇಶ್ಯಾವಾಟಿಕೆ… ಪೊಲೀಸರ ದಾಳಿ, ಮೂವರ ಬಂಧನ -ಕಹಳೆ ನ್ಯೂಸ್

ಬೆಳ್ತಂಗಡಿ: ತಾಲೂಕಿನ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ ‘ಪವನ್ ಕ್ಯಾಂಟೀನ್’ ಮೇಲೆ ಬೆಳ್ತಂಗಡಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಅಕ್ರಮವಾಗಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಪತ್ತೆಹಚ್ಚಿದ್ದಾರೆ. ದಾಳಿಯ ವೇಳೆ ಕ್ಯಾಂಟಿನ್ ಮಾಲೀಕ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕ್ಯಾಂಟೀನ್ ಮಾಲಕ ಸುಂದರ್ ಶೆಟ್ಟಿ ಹಾಗೂ ಗಿರಾಕಿಗಳಾದ ಉಸ್ಮಾನ್, ಹೈದರ್ ಬಂಧಿತರು.

ಪವನ್‌ ಕ್ಯಾಂಟೀನ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದಾಗ ವೇಶ್ಯಾವಾಟಿಕೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. 29 ವರ್ಷದ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಿ, 5 ಸಾವಿರ ಹಣವನ್ನು ವಶಕ್ಕೆ ಪಡೆಯಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.