Tuesday, July 28, 2026
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಲೋಕಸಭಾ ಸದಸ್ಯರ ಭೇಟಿ. -ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರನ್ನು ಸೇವಾಭಾರತಿ ತಂಡ ಮೇ 12 ರಂದು ಭೇಟಿ ನೀಡಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಕುರಿತು ಪ್ರಸ್ತಾಪಿಸಿ ಸಹಕರಿಸುವಂತೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಸೇವಾಭಾರತಿ ಅಧ್ಯಕ್ಷ ಹಾಗೂ ಸೇವಾಧಾಮದ ಸಂಸ್ಥಾಪಕರಾದ ಶ್ರೀ ಕೆ ವಿನಾಯಕ ರಾವ್, ಸೇವಾಭಾರತಿಯ ಖಜಾಂಚಿ ಶ್ರೀ ಜೈ ರಾಜ್ ಸಾಲ್ಯಾನ್ ಕಾನರ್ಪ, ಟ್ರಸ್ಟಿ ಶ್ರೀ ಪೃಥ್ವಿಶ್ ಹಾಗೂ ಕುವೆಟ್ಟು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ಚಂದ್ರಕಾಂತ್ ನಿಡ್ಡಾಜೆ, ಸ್ವಯಂಸೇವಕರಾದ ಶ್ರೀ ಜಯರಾಜ್ ರವರು ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು