Monday, May 18, 2026
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ : ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು -ಕಹಳೆ ನ್ಯೂಸ್

ಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ಬೆಳಲು ನಿವಾಸಿ ನೌಫಾಲ್ (28) ಸಾವನ್ನಪ್ಪಿದ್ದಾರೆ. ಇನ್‌ಸ್ಟಾ ಮಾರ್ಟ್‌ ಸಪ್ಲೈ ಪಾಯಿಂಟ್‌ನಲ್ಲಿ ದಿನಸಿ ವಸ್ತುಗಳನ್ನು ಲಿಫ್ಟ್‌ನಲ್ಲಿ ಸಾಗಿಸುತ್ತಿದ್ದರು. ಈ ವೇಳೆ ದುರ್ಘಟನೆಯಾಗಿದೆ.

ವಸ್ತುಗಳನ್ನು ಸಾಗಿಸುತ್ತಿದ್ದ ವೇಳೆ ಏಕಾಏಕಿ ಲಿಫ್ಟ್ ಕುಸಿದಿದೆ. ಲಿಫ್ಟ್‌ನಲ್ಲಿ ಸಿಲುಕಿ ನೌಫಾಲ್ ಸಾವಿಗೀಡಾಗಿದ್ದಾರೆ. ದುರಂತದ ದೃಶ್ಯ ಸಿಸಿ ಕ್ಯಾಮರಾದಲ್ಲಿ‌ ಸೆರೆಯಾಗಿದೆ. ಕದ್ರಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು