Wednesday, June 10, 2026
ಸುದ್ದಿ

ಬಿಹಾರದಲ್ಲಿ ಧಗಧಗಿಸಿದ ಪ್ಯಾಸೆಂಜರ್‌ ರೈಲು : ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಶಂಕೆ – ಕಹಳೆ ನ್ಯೂಸ್

ಪಾಟ್ನಾ: ಬಿಹಾರದ  ಸಸಾರಾಮ್ ರೈಲು ನಿಲ್ದಾಣದಲ್ಲಿ ಪ್ಯಾಸೆಂಜರ್ ರೈಲೊಂದು ಹೊತ್ತಿ ಉರಿದಿದೆ. ಬೆಂಕಿಯ ತೀವ್ರತೆಗೆ ಒಂದು ಬೋಗಿ ಸಂಪೂರ್ಣ ಸುಟ್ಟುಹೋಗಿದೆ. ಬೆಂಕಿಯನ್ನು ನಂದಿಸಲು ರೈಲ್ವೆ ಸಿಬ್ಬಂದಿ ಹರಸಾಹಸ ಪಡುತ್ತಿರುವ ದೃಶ್ಯಗಳು ಹಾಗೂ ರೈಲು ಬೋಗಿಯಿಂದ ದಟ್ಟ ಹೊಗೆ ಹೊರಬರುತ್ತಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ. ಈ ರೈಲು ಪಾಟ್ನಾಗೆ ತೆರಳಲು ಸಜ್ಜಾಗಿತ್ತು. ಈ ವೇಳೆ ಅಗ್ನಿ ಅವಘಡ ಸಂಭವಿಸಿದೆ.

ಜಾಹೀರಾತು

ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಸಾವು ನೋವುಗಳು ವರದಿಯಾಗಿಲ್ಲ. ಪ್ಲಾಟ್‌ಫಾರ್ಮ್‌ನಲ್ಲಿದ್ದ ಪ್ರಯಾಣಿಕರು ದಟ್ಟವಾದ ಬೆಂಕಿಯನ್ನು ಕಂಡು ಕೆಲಕಾಲ ಆತಂಕಕ್ಕೆ ಒಳಗಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಭಾನುವಾರ ಮಧ್ಯಪ್ರದೇಶದ ರತ್ಲಂನಲ್ಲಿ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ನ ಎಸಿ ಕೋಚ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿತ್ತು. ಇದಾದ ಮರುದಿನವೇ ಬಿಹಾರದಲ್ಲಿ ಅಂತಹ ಅವಘಡ ನಡೆದಿದೆ.