
ಕೋಲಾರ: ಮಗುವೊಂದು ಆಟವಾಡುವಾಗ ಆಕಸ್ಮಿಕವಾಗಿ ಬೆಟ್ಟದ ನೆಲ್ಲಿಕಾಯಿ ನುಂಗಿದ ಪರಿಣಾಮ ನೆಲ್ಲಿಕಾಯಿ ಗಂಟಲಲ್ಲಿ ಸಿಲುಕಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಕೋಲಾರದಲ್ಲಿ ನಡೆದಿದೆ.
ವಿಜಯೇಂದ್ರ(2 ವರ್ಷ) ಮೃತ ಮಗು. ಈ ಪುಟಾಣಿ ಎಂದಿನಂತೆ ಮನೆಯಲ್ಲಿ ಆಟವಾಡುತ್ತಿದ್ದಾಗ ನೆಲ್ಲಿಕಾಯಿ ಬಾಯಿಗೆ ಹಾಕಿಕೊಂಡಿದೆ. ಈ ವೇಳೆ ನೆಲ್ಲಿಕಾಯಿ ಗಂಟಲಲ್ಲಿ ಸಿಲುಕಿ ಮಗುವಿಗೆ ತೀವು ಉಸಿರಾಟದ ಸಮಸ್ಯೆ ಉಂಟಾಗಿದೆ. ಇದರಿಂದ ಗಾಬರಿಗೊಂಡ ಪೋಷಕರು ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಆದರೆ ಮಗು ಅಷ್ಟರಲ್ಲೇ ಕೊನೆಯುಸಿರೆಳೆದಿತ್ತು. ಇನ್ನು ಈ ಪುಟ್ಟ ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.









