Thursday, May 21, 2026
ಕಾಸರಗೋಡುಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಜಲಪಾತ ವೀಕ್ಷಣೆಗೆ ಬಂದಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಅಬ್ದುಲ್ ಖಾದರ್ ಅಲ್ತಫ್, ಫೈಜಲ್ ಅದಿಲ್ ಮತ್ತು ಉಸ್ಮಾನ್ ಸಾಲೀಂ ಎಂಬ ಕಾಮುಕ ಆರೋಪಿಗಳಿಗೆ ನ್ಯಾಯಾಂಗ ಬಂಧನ..! – ಕಹಳೆ ನ್ಯೂಸ್

ಜಲಪಾತ ವೀಕ್ಷಣೆಗೆ ಬಂದಿದ್ದ ಮೂವರು ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ. ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳ ರಾಜ್ಯದ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಮತ್ತು ಉಸ್ಮಾನ್ ಸಾಲೀಂ (18) ಎಂಬ ಮೂವರು ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬೆಳ್ತಂಗಡಿ: ಜಲಪಾತ ವೀಕ್ಷಣೆಗೆ ಬಂದಿದ್ದ ಮೂವರು ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ. ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳ ರಾಜ್ಯದ ಕಾಸರಗೋಡು ಮೂಲದ ಮೂವರು
ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36). ಫೈಜಲ್ ಅದಿಲ್ (27) ಮತ್ತು ಉಸ್ಮಾನ್ ಸಾಲೀಂ (18) ಬಂಧಿತ ಆರೋಪಿಗಳು.

ಘಟನೆಯ ವಿವರ:
ಮೇ 20ರಂದು ಸಂಜೆ ಮೂವರು ಯುವತಿಯರು ಜಲಪಾತ ವೀಕ್ಷಣೆಗೆ ಬಂದಿದ್ದಾಗ, ಆರೋಪಿಗಳು ಅವರೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಘಟನೆ ನಡೆದ ತಕ್ಷಣ ಕಾರ್ಯಾಚರಣೆ ನಡೆಸಿದ ಬೆಳ್ತಂಗಡಿ ಪೊಲೀಸರು ಅದೇ ದಿನ ರಾತ್ರಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ನ್ಯಾಯಾಂಗ ಬಂಧನ:
ಬಂಧಿತರನ್ನು ಮೇ 21ರ ಸಂಜೆ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು. ಬಳಿಕ ಅವರನ್ನು ಬೆಳ್ತಂಗಡಿ ನ್ಯಾಯಾಲಯದ ಹೆಚ್ಚುವರಿ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ವಿಜಯೇಂದ್ರ ಟಿ. ಎಚ್. ಅವರ ಮುಂದೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗಳಿಗೆ 11 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ.

ಸಂತ್ರಸ್ತೆಯರ ಹೇಳಿಕೆ ದಾಖಲು:
ಇದೇ ವೇಳೆ, ನೊಂದ ಮೂವರು ಯುವತಿಯರನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆದೊಯ್ದು. ಮಧ್ಯಾಹ್ನದಿಂದ ಸಂಜೆಯವರೆಗೆ ಸುದೀರ್ಘವಾಗಿ BNS 183 ಅಡಿ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ್ದಾರೆ. ಪೊಲೀಸರು ಪ್ರಕರಣದ ಮುಂದಿನ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.