Thursday, May 21, 2026
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಕಟಾರ ಹೊಳೆಯಲ್ಲಿ ದುರ್ಘಟನೆ ; ಕಣ್ಮರೆಯಾದ ಪುತ್ತೂರಿನ ವಿವೇಕಾನಂದ ಫಾರ್ಮಾಸ್ಯುಟಿಕಲ್ ಕಾಲೇಜಿನ ವಿದ್ಯಾರ್ಥಿಯ ಮೃತದೇಹ ಪತ್ತೆ – ಕಹಳೆ ನ್ಯೂಸ್

ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಕಠಾರ ಹೊಳೆಯಲ್ಲಿ ಕಣ್ಮರೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ.

ಮೃತ ವಿದ್ಯಾರ್ಥಿಯನ್ನು ಪುತ್ತೂರಿನ ವಿವೇಕಾನಂದ ಫಾರ್ಮಾಸ್ಯುಟಿಕಲ್ ಕಾಲೇಜಿನ ತೃತೀಯ ವರ್ಷದ ವಿದ್ಯಾರ್ಥಿ ಕಿರಣ್ ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಗದಗ ಮೂಲದವರಾಗಿರುವ ಕಿರಣ್ ಕಲ್ಲಡ್ಕದಲ್ಲಿ ವಾಸ್ತವ್ಯ ಹೊಂದಿದ್ದರು ಎಂದು ತಿಳಿದುಬಂದಿದೆ. ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಹೊಳೆಗಿಳಿದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ನಡೆಸಿದ ತೀವ್ರ ಕಾರ್ಯಾಚರಣೆಯಲ್ಲಿ ಮೃತದೇಹ ಪತ್ತೆಯಾಗಿದೆ.