Saturday, May 23, 2026
ದೆಹಲಿರಾಜ್ಯಸುದ್ದಿ

ಉಮರ್ ಖಾಲಿದ್ ಗೆ ಮೂರು ದಿನಗಳ ಮಧ್ಯಂತರ ಜಾಮೀನು ಮಂಜೂರು – ಕಹಳೆ ನ್ಯೂಸ್

ವದೆಹಲಿ: ದೆಹಲಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಉಮರ್ ಖಾಲಿದ್ ಗೆ ದೆಹಲಿ ಹೈಕೋರ್ಟ್ ಮೂರು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

2020ರಲ್ಲಿ ಈಶಾನ್ಯ ದೆಹಲಿ ಭಾಗದಲ್ಲಿ ನಡೆದಿದ್ದ ಗಲಭೆ ಪ್ರಕರಣದ ರೂವಾರಿ ಉಮರ್ ಖಾಲಿದ್ ಗೆ ಜೂನ್ 1ರಿಂದ ಜೂನ್ 3ರವರೆಗೆ ಮೂರು ದಿನ್ಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಉಮರ್ ಖಾಲಿದ್ ಜಾಮೀನು ಅರ್ಜಿಯನ್ನು ದೆಹಲಿಯ ಹೆಚ್ಚುವರಿ ಸೆಷನ್ಸ್ ಕೋರ್ಟ್ ಮಂಗಳವಾರ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಖಾಲಿದ್ ಹೈಕೋರ್ಟ್ ಮೊರೆ ಹೋಗಿದ್ದ. ಸೋದರ ಸಂಬಂಧಿ ಮೃತಪಟ್ಟಿದ್ದು 40 ದಿನಗಳ ಕಾಲ ನಡೆಯುವ ಧಾರ್ಮಿಕ ವಿಧಿಗಳಲ್ಲಿ ಪಾಲ್ಗೊಳ್ಳಬೇಕು. ತಾಯಿ ಕೂಡ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಆರೈಕೆ ಮಾಡಬೇಕಾದ ಅಗತ್ಯವಿದೆ. ಹಾಗಾಗಿ 15 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡುವಂತೆ ಕೋರಿ ಖಾಲಿದ್ ಅರ್ಜಿ ಸಲ್ಲಿಸಿದ್ದ.