
ಕಠ್ಮಂಡು: ವಿಶ್ವದ ಅತಿ ಎತ್ತರದ ಶಿಖರವಾದ ಮೌಂಟ್ ಎವರೆಸ್ಟ್ ಏರಿದ ಇಬ್ಬರು ಭಾರತೀಯ ಪರ್ವತಾರೋಹಿಗಳು ಇಳಿಯುವ ವೇಳೆ ಮೃತಪಟ್ಟಿದ್ದಾರೆ.
ಅರುಣ್ ಕುಮಾರ್ ತಿವಾರಿ ಮತ್ತು ಸಂದೀಪ್ ಅರೆ ಸಾವನ್ನಪ್ಪಿದ ಪರ್ವತಾರೋಹಿಗಳು ಎಂದು ಗುರುತಿಸಲಾಗಿದೆ. ಸಂದೀಪ್ ಅರೆ ಬುಧವಾರ ಹಾಗೂ ಅರುಣ್ ಕುಮಾರ್ ತಿವಾರಿ ಗುರುವಾರ ಸಂಜೆ ಎವರೆಸ್ಟ್ ಶಿಖರ ತಲುಪಿದ್ದರು. ಆದರೆ ಶಿಖರದಿಂದ ಕೆಳಗಿಳಿಯುವ ವೇಳೆ ಇಬ್ಬರೂ ಪ್ರಾಣ ಕಳೆದುಕೊಂಡಿದ್ದಾರೆ. ಮಾರ್ಗದರ್ಶಕರು ಅವರನ್ನು ರಕ್ಷಿಸಲು ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.










