
ಕೋಲ್ಕತ್ತಾ: ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನಪ್ರಿಯ ಬಂಗಾಳಿ ತಿನಿಸು ನೀಡಿ ಗಮನ ಸೆಳೆದಿದ್ದ ಪಶ್ಚಿಮ ಬಂಗಾಳದ ಜಲ್ಮುರಿ ಮಾರಾಟಗಾರನಿಗೆ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬೆದರಿಕೆ ಕರೆಗಳು ಬರುತ್ತಿವೆ.
ಜಲ್ಮುರಿ ಮಾರಾಟಗಾರ ಬಿಕ್ರಮ್ ಸೌಗೆ ಕಳೆದ ಕೆಲವು ದಿನಗಳಿಂದ ಕೊಲೆ ಬೆದರಿಕೆಗಳು ಬಂದಿವೆ. ಪದೇ ಪದೇ ಫೋನ್ ಮತ್ತು ವೀಡಿಯೊ ಕರೆಗಳ ಮೂಲಕ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.










