
ಬೆಳಗಾವಿ: ಕೆಎಲ್‌ಇ ಆಸ್ಪತ್ರೆಯಲ್ಲಿ ಕಳೆದ 40 ವರ್ಷಗಳಿಂದ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ. ದಿನೇಶ್ ಭಟ್ಕಳ್ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡಾ.ದಿನೇಶ್ ಭಟ್ಕಳ್ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮೂಲದವರು. ಆದರೆ, ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ಸುಮಾರು 40 ವರ್ಷಗಳ ಕಾಲ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಇವರಿಗೆ ಶ್ವಾಸಕೋಶ ಕ್ಯಾನ್ಸರ್ ಇರುವುದು ಗೊತ್ತಾಗಿತ್ತು. ಚಿಕಿತ್ಸೆಗಾಗಿಯೇ ತಮ್ಮೂರು ಬಿಟ್ಟು ಬೆಳಗಾವಿಯ ಟಿಳಕವಾಡಿಯ ಮಂಡೋಲಿ ರಸ್ತೆಯಲ್ಲಿ ಮನೆ ಮಾಡಿಕೊಂಡು ಕುಟುಂಬಸ್ಥರೊಂದಿಗೆ ವಾಸವಿದ್ದರು.










