Monday, May 25, 2026
ಬೆಂಗಳೂರುರಾಜ್ಯಸುದ್ದಿ

ಇಂದು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಅನೇಕ ಕಡೆ ಮುಂಗಾರು ಪೂರ್ವ ಮಳೆಯಾಗುತ್ತಿದ್ದು (Rain), 17 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಯಾದಗಿರಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 24ರಂದು ಗುಡುಗು, ಮಿಂಚು, ಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತಗೊ೦ಡ ಪರಿಣಾಮ ಬಾಗಲಕೋಟೆ, ಗದಗ, ಧಾರವಾಡದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕೊಪ್ಪಳ ಹಾಗೂ ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಗುಡುಗು ಮಿಂಚಿನ ಸಹಿತ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಮೇ 25ರವರೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದ್ದು, ಕರಾವಳಿಯಲ್ಲಿ ಸಾಧಾರಣದಿಂದ ಕೂಡಿದ ಮಧ್ಯಮ ಮಳೆ ಬೀಳುವ ಸಾಧ್ಯತೆ ಇದೆ. ಆರೆಂಜ್ ಅಲರ್ಟ್‌ನಲ್ಲಿ ಬಿರುಗಾಳಿ ಗಂಟೆಗೆ 50ರಿಂದ 60 ಕಿ.ಮೀ. ವೇಗದಲ್ಲಿ ಬೀಸಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ.