Thursday, May 28, 2026
ರಾಜ್ಯಸುದ್ದಿ

ಡಿಕೆಶಿ ಹೇಳಿಕೆಗೆ ವಿರೋಧ : ಮೋದಿಗೆ ಪತ್ರ ಬರೆದು ಮೇಕೆದಾಟು DPR ತಿರಸ್ಕರಿಸುವಂತೆ ವಿಜಯ್‌ ಒತ್ತಾಯ -ಕಹಳೆ ನ್ಯೂಸ್

ಚೆನ್ನೈ: ಕಾವೇರಿ ನದಿಗೆ ಅಡ್ಡಲಾಗಿ ಕರ್ನಾಟಕ ಸರ್ಕಾರದ  ಮಹತ್ವಾಕಾಂಕ್ಷೆಯ ಮೇಕೆದಾಟು ಜಲಾಶಯ ಯೋಜನೆಯ ಭೂಮಿ ಪೂಜೆ ಘೋಷಣೆಗೆ ತಮಿಳುನಾಡು  ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಈ ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಒತ್ತಾಯಿಸಿ ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್  ಅವರು ಪ್ರಧಾನಿ ನರೇಂದ್ರ ಮೋದಿ  ಅವರಿಗೆ ಸುದೀರ್ಘ ಪತ್ರ ಬರೆದಿದ್ದಾರೆ.

ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸಾರ್ವಜನಿಕ ಹೇಳಿಕೆಗಳು ಹಾಗೂ ಭೂಮಿ ಪೂಜೆಯ  ಘೋಷಣೆಯು, ಜೀವನೋಪಾಯಕ್ಕಾಗಿ ಕಾವೇರಿ ನದಿಯನ್ನೇ ನಂಬಿಕೊಂಡಿರುವ ತಮಿಳುನಾಡಿನ ಲಕ್ಷಾಂತರ ರೈತರಲ್ಲಿ ಭಾರಿ ಆತಂಕ ಮೂಡಿಸಿದೆ ಎಂದು ವಿಜಯ್‌ ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು