
ಚೆನ್ನೈ: ಹೊಸ ತಮಿಳು ಸಿನಿಮಾಗಳ ಬಿಡುಗಡೆಯ ಮೊದಲ ಏಳು ದಿನಗಳ ಕಾಲ ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿ ದಿನಕ್ಕೆ ಐದು ಶೋಗಳನ್ನು ಪ್ರದರ್ಶಿಸಲು ತಮಿಳುನಾಡು ಸರ್ಕಾರ ಅನುಮತಿ ನೀಡಿದೆ. ಈ ಕುರಿತು ಮುಖ್ಯಮಂತ್ರಿ ಜೋಸೆಫ್ ವಿಜಯ್ ಆದೇಶ ಹೊರಡಿಸಿದ್ದಾರೆ.
ತಮಿಳು ಚಿತ್ರರಂಗದ ಪ್ರತಿನಿಧಿಗಳು ಮುಖ್ಯಮಂತ್ರಿ ವಿಜಯ್ ಅವರನ್ನು ಭೇಟಿಯಾಗಿ, ಎಲ್ಲಾ ಚಿತ್ರಮಂದಿರಗಳಲ್ಲಿ ದಿನಕ್ಕೆ ಐದು ಶೋಗಳನ್ನು ಪ್ರದರ್ಶಿಸಲು ಅನುಮತಿ ನೀಡುವಂತೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಸರ್ಕಾರ ಇದೀಗ ನಿಯಮಗಳಲ್ಲಿ ತಿದ್ದುಪಡಿ ಮಾಡಿದೆ.
ಈ ಹಿಂದೆ ತಮಿಳುನಾಡು ಸಿನಿಮಾ ನಿಯಂತ್ರಣ ನಿಯಮಗಳ ಪ್ರಕಾರ ಚಿತ್ರಮಂದಿರಗಳಲ್ಲಿ ದಿನಕ್ಕೆ ನಾಲ್ಕು ಶೋಗಳಿಗೆ ಮಾತ್ರ ಅನುಮತಿ ಇತ್ತು. ವಿಶೇಷ ಹಬ್ಬಗಳು ಹಾಗೂ ಸಾರ್ವಜನಿಕ ರಜೆ ದಿನಗಳಲ್ಲಿ ಮಾತ್ರ ಹೆಚ್ಚುವರಿ ಒಂದು ಶೋ ನಡೆಸಲು ಅವಕಾಶ ನೀಡಲಾಗುತ್ತಿತ್ತು.










